Post Views: 425
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್
BIG NEWS : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ : ಆಗಷ್ಟ್ 28ರಿಂದ ಅರ್ಜಿ ಸಲ್ಲಿಕೆ ಆರಂಭ!

ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ ಆಗಷ್ಟ್ 28ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 18ರ ಕೊನೆಯ ದಿನವಾಗಿದ್ದು, ಅರ್ಜಿ ಶುಲ್ಕ ಪಾವತಿಗೆ ಸೆಪ್ಟಂಬರ್ 19ರವರೆಗೆ ಅವಕಾಶವಿರುತ್ತದೆ.

ಅಕ್ಟೋಬರ್ 24ರಂದು ಪ್ರವೇಶ ಪತ್ರ (ಹಾಲ್ ಟಿಕೆಟ್) ಬಿಡುಗಡೆಯಾಗಲಿದೆ. ಆನ್ ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.
ಕೆಸೆಟ್-2025ರ ಪರೀಕ್ಷೆಯ ದಿನಾಂಕ ನವಂಬರ್ 02 ರಂದು ನಡೆಯಲಿದೆ. ಅಭ್ಯರ್ಥಿಗಳು ಕೆಸೆಟ್-2025ಕ್ಕೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು, ಕೆಲ ವೆಬ್‌ಸೈಟ್ https:/lettininkarnataka.gov.in/kol ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.