BREAKING : ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಷೇಧ ಮಾಡಿಲ್ಲ:ಸಚಿವ ಶಿವರಾಜ್ ತಂಗಡಗಿ ಹೇಳಿಕೆ!
ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ಗಣೇಶೋತ್ಸವದಲ್ಲಿ ಡಿಜೆ ಬಳಕೆ ನಿಷೇಧ ಮಾಡಿಲ್ಲ. ಕೋರ್ಟ್ ನಿಯಮಗಳ ಪ್ರಕಾರ ಬಳಕೆ ಮಾಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗಣೇಶ ಹಬ್ಬದ ವೇಳೆ ಡಿಜೆ ಬಳಕೆ ಕುರಿತು ಸರ್ಕಾರದ ಮಾರ್ಗಸೂಚಿ ಪ್ರಕಾರ ನಡೆಸಲಾಗುವುದು. ಈ ವಿಷಯದಲ್ಲಿ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ. ಆದರೆ ಡಿಜೆ ನಿಷೇಧ ಮಾಡಿಲ್ಲ” ಎಂದು ತಿಳಿಸಿದ್ದಾರೆ.
“ಡಿಜೆ ನಿಷೇಧ ಎನ್ನುವ ಬಿಜೆಪಿಯ ಮಾತು ಕೇಳಬೇಡಿ. ಡಿಜೆ ಬಳಕೆಗೆ ಕೋರ್ಟ್ ಮಾರ್ಗಸೂಚಿಯ ಪ್ರಕಾರ ಇಂತಿಷ್ಟು ಡೆಸಿಬಲ್ ಇರಬೇಕು ಎನ್ನುವ ನಿಯಮವಿದೆ. ಆ ಪ್ರಕಾರ ನೋಡಿಕೊಳ್ಳಬೇಕು. ಯುವಕರಿಗೆ 18ನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು ನಮ್ಮ ಕಾಂಗ್ರೆಸ್. ಹೀಗಿರುವಾಗ ನಾವು ಯುವಕರಿಗೆ ಹೇಗೆ ಡಿಜೆ ಬಳಕೆಗೆ ನಿಷೇಧ ಹೇರಲು ಸಾಧ್ಯವೇ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ.