ಬೆಂಗಳೂರು : ನಿನ್ನೆ ಬಿಜೆಪಿಗೆ (BJP) ರಾಜೀನಾಮೆ ನೀಡಿರುವ ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ನಗರದ ಕೆಪಿಸಿಸಿ (KPCC) ಕಚೇರಿಯಲ್ಲಿ ಇಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಅವರು ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್ ನ ಬಾವುಟ ನೀಡಿ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಗೆ ಬರ ಮಾಡಿಕೊಂಡರು.
ಈ ವೇಳೆ ಮಾತನಾಡಿದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಜಗದೀಶ್ ಶೆಟ್ಟರ್ ಜೊತೆ ಹಲವು ನಾಯಕರು ಬರುತ್ತಿದ್ದಾರೆ. ನಮ್ಮ ಪಕ್ಷದ ನೀತಿ ಒಪ್ಪಿಕೊಂಡು ಬರುತ್ತಿದ್ದಾರೆ. ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಗೆ ಹೆಚ್ಚು ಶಕ್ತಿ ಬರಲಿದೆ. ಅವರು ಸರಳ ಸಜ್ಜನೀಯ ರಾಜಕಾರಣಿಯಾಗಿದ್ದಾರೆ ಎಂದು ಹೇಳಿದ್ದಾರೆ.