ಇಂದು ಐಪಿಎಲ್‌ನಲ್ಲಿ ಒಂದೇ ಒಂದು ಪಂದ್ಯವಿದ್ದು, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೇಂಜರ್ಸ್ ಬೆಂಗಳೂರು ಹಣಾಹಣಿ ನಡೆಯುತ್ತಿದೆ. ರಾಯಲ್ ಚಾಲೇಂಜರ್ಸ್ ಬೆಂಗಳೂರು ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ಮೊದಲು ಬ್ಯಾಟಿಂಗ್ ಮಾಡಲಿದೆ. ಇಂದು ಸಂಜೆ 07: 30ಕ್ಕೆ ಬೆಂಗಳೂರಿನ M. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಹೈವೋಲ್ಟೆಸ್ ಕದನ ನಡೆಯಲಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ, ವಿಕೆಟ್ ಕೀಪರ್) , ಮತಿಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ಟೀಕ್ಷಣ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11 : ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹರ್ಷಲ್ ಪಟೇಲ್, ಹಸರಂಗ, ವ್ಯಾನ್ ಪಾರ್ನೆಲ್, ವೈಶಾಕ್ ವಿಜಯ್ ಕುಮಾರ್,ಮೊಹಮ್ಮದ್ ಸಿರಾಜ್.