ಮುದಗಲ್ಲ ವರದಿ..
ಮುದಗಲ್ಲನಲ್ಲಿ ಹದಗೆಟ್ಟ ರಸ್ತೆ: ರಾಜ್ಯ ಹೆದ್ದಾರಿ ನುಂಗಿದ ಗುಂಡಿಗಳು..

ಲಿಂಗಸೂರು ತಾಲ್ಲೂಕಿನ ಮುದಗಲ್ಲ ಪಟ್ಟಣದ ರಾಯಚೂರು – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಗುಂಡಿಗಳು ತುಂಬಿದ್ದು ದಿನವೂ ವಾಹನ ಸವಾರರು ಪರದಾಡ ಬೇಕಾದ ದುಃಸ್ಥಿತಿ ನಿರ್ಮಾಣ ವಾಗಿದೆ..
ಇಡೀ ರಸ್ತೆ ಗುಂಡಿಮಯವಾಗಿದ್ದು ಗುಂಡಿ ತಪ್ಪಿಸಲು ಹೋದರೆ ಅಪಘಾತ ಸಂಭವಿಸುವ ಸಾಧ್ಯತೆ ಇರುವುದರಿಂದ ಜನರಿಗೆ ಗೋಳು ತಪ್ಪಿಲ್ಲ.
ಮಳೆ ಬರುವಾಗ ರಸ್ತೆಯಲ್ಲಿ ಅಲ್ಲಲ್ಲಿ ನೀರು ನಿಲ್ಲುವುದರಿಂದ ಗುಂಡಿಗಳ ಅರಿವಿಲ್ಲದೆ ನೇರವಾಗಿ ಸಾಗುವ ದ್ವಿಚಕ್ರ ವಾಹನ ಸವಾರರು ಗುಂಡಿಗೆ ಬಿದ್ದು ಅಪಘಾತಕ್ಕೆ ಸಿಲುಕುತ್ತಿದ್ದಾರೆ.
ರಾಯಚೂರು – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ದೊಡ್ಡ ಗಾತ್ರದ ಹೊಂಡಗಳಾಗಿದ್ದು, ಚರಂಡಿಯ ವ್ಯವಸ್ಥೆ ಸರಿಯಿಲ್ಲದೇ ಮಳೆಯ ನೀರು ರಸ್ತೆಯಲ್ಲಿ ಹರಿದು ಹಲವಾರು ಅವಾಂತರಗಳಿಗೆ ಕಾರಣವಾಗುತ್ತಿದೆ.
ಮಳೆಯ ನೀರು ರಸ್ತೆಯಲ್ಲಿ ಹರಿಯುವುದರಿಂದ ಬೃಹತ್ ಗಾತ್ರದ ಹೊಂಡಗಳು ನಿರ್ಮಾಣವಾಗಿ ಹಲವು ಬಾರಿ ಅಪಘಾತಗಳು ಸಂಭವಿಸಿವೆ.
ರಸ್ತೆಯಲ್ಲಿ ಅಲ್ಲಲ್ಲಿ ಹೊಂಡಗಳು ತುಂಬಿಕೊಂಡಿರುವುದರಿಂದ ಅನೇಕ ಬಾರಿ ಅಪಘಾತಗಳು ಸಂಭವಿಸಿವೆ. ಮಳೆ ಬೀಳುವ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ನಡೆದುಕೊಂಡು ಹೋಗಲು ಕೂಡ ತೊಂದರೆ ಯಾಗುತ್ತಿದೆ.
ಮಳೆ ನೀರು ರಸ್ತೆಯಲ್ಲೇ ಹರಿಯುವುದರಿಂದ ಪಾದಚಾರಿಗಳು, ವಿದ್ಯಾರ್ಥಿಗಳು ಮಳೆಯ ಸಂದರ್ಭದಲ್ಲಿ ರಸ್ತೆಯ ಬದಿ ನಡೆದುಕೊಂಡು ಹೋಗಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಇದೆ. ಈ ಭಾಗದಲ್ಲಿ ರಾಜ್ಯ ಹೆದ್ದಾರಿ ಕಿರಿದಾಗಿದ್ದು ದಿನನಿತ್ಯ ಅನೇಕ ಘನ ವಾಹನಗಳು ಸಂಚರಿಸುತ್ತಿವೆ.
ಹಾಗೂ ಪಟ್ಟಣದ ಎಪಿಎಂಸಿ ಹತ್ತಿರ ರಾಜ್ಯ ಹೆದ್ದಾರಿಯಲ್ಲಿ ಬರುವ ಮನೆ ಗಳಿನಿಂದ ಹಾಗೂ ಬಿಸಿಎಂ ವಿದ್ಯಾರ್ಥಿ ನಿಲಯದವರು ನೀರು ರೋಡಿಗೆ ಬಿಡುವದರಿಂದ ಸಾರ್ವಜನಿಕರಿಗೆ ತೊಂದರೆ ಹಾಗೂ ರಸ್ತೆ ಅಪಘಾತಗಳು ಆಗುತ್ತಿದು ಕೂಡಲೇ ಸ್ಥಳೀಯ ಪುರಸಭೆಯ ಸಂಬಂಧ ಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಯಾರು ನೀರು ಬಿಡುತ್ತಾರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕ
ಜನಪ್ರತಿನಿಧಿಗಳು, ಹೆದ್ದಾರಿ ಇಲಾಖೆ ಹಾಗೂ ಜಿಲ್ಲಾಡಳಿತ ಈ ಕುರಿತು ತುರ್ತಾಗಿ ಸ್ಪಂದಿಸಿ ರಸ್ತೆ ಹೊಂಡಗಳ ಸಮಸ್ಯೆಗೆ ಮುಕ್ತಿ ನೀಡಬೇಕು ಎಂದು ಕೃಷ್ಣ ಛಲವಾದಿ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ Sc Cell ಮುದಗಲ್ ಸಮಿತಿ ಪತ್ರಿಕೆ ಮುಖಾಂತರ ಒತ್ತಾಯ ಮಾಡಿದರು.
ವರದಿ :-ಮಂಜುನಾಥ ಕುಂಬಾರ