BIG NEWS : ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಈಗ 5 ಪಾಲಿಕೆಗಳಾಗಿ ವಿಂಗಡಣೆ!

You are currently viewing BIG NEWS : ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಈಗ 5 ಪಾಲಿಕೆಗಳಾಗಿ ವಿಂಗಡಣೆ!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌

BIG NEWS : ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಈಗ 5 ಪಾಲಿಕೆಗಳಾಗಿ ವಿಂಗಡಣೆ!

ಬೆಂಗಳೂರು : ರಾಜಧಾನಿ ಬೆಂಗಳೂರು ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂದು ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಿದೆ. ಈ ಬೆನ್ನಲ್ಲೇ 5 ಪಾಲಿಕೆಗಳಾಗಿ ವಿಂಗಡಣೆ ಮಾಡಿ, ಆಡಳಿತವನ್ನು ಸುಗಮವಾಗಿಸೋದಕ್ಕೆ ಇಂದು ಆದೇಶಿಸಿದೆ. ಇದೇ ಸೆಪ್ಟೆಂಬರ್ 2 ರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ಜಾರಿಗೊಳ್ಳಲಿದೆ ಎಂದು ಅಧಿಕೃತ ಮಾಹಿತಿ ಲಭ್ಯವಾಗಿದೆ.

ರಾಜ್ಯ ಸರ್ಕಾರದಿಂದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವಾಗಿ ರಚನೆ ಮಾಡಲಾಗಿತ್ತು. ಈ ಪ್ರಾಧಿಕಾರದ ಆಡಳಿತ ಸೆಪ್ಟೆಂಬರ್ 2 ರಿಂದ ಜಾರಿಯಾಗಲಿದೆ. ಹೀಗಾಗಿ ಇನ್ಮುಂದೆ ಬಿಬಿಎಂಪಿ ಬದಲಾಗಿ “ಗ್ರೇಟರ್ ಬೆಂಗಳೂರು ಪ್ರಾಧಿಕಾರ” ಆಡಳಿತ ನಡೆಸಲಿದೆ.

ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆಯನ್ನಾಗಿ ಬೆಂಗಳೂರನ್ನು ವಿಂಗಡಿಸಲಾಗಿದೆ. ಐದು ಪಾಲಿಕೆಗಳ ಕಚೇರಿ ಎಲ್ಲೆಲ್ಲಿ ಬರಲಿವೆ ಎನ್ನುವ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಜೊತೆಗೆ ಆ ಐದು ಪಾಲಿಕೆಗೆ ಆಡಳಿತವನ್ನು ವಿಕೇಂದ್ರೀಕರಿಸಿ, ಅಧಿಕಾರಿ, ಸಿಬ್ಬಂದಿ ಹಂಚಿಕೆ ಮಾಡಿ ಆದೇಶಿಸಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆಗಳಿಗೆ 10 ತಾತ್ಕಾಲಿಕ ಕಚೇರಿಗಳ ಗುರುತಿಸಲಾಗಿದೆ.

1.ಬೆಂಗಳೂರು ನಗರ ಕೇಂದ್ರ ನಗರ ಪಾಲಿಕೆ : ಹಾಲಿ ಪೂರ್ವ ವಲಯ ಕಚೇರಿ, ಕೇಂದ್ರ ಕಚೇರಿ ಅನೆಕ್ಸ್ ಕಟ್ಟಡ

2.ಬೆಂಗಳೂರು ಪೂರ್ವ ನಗರ ಪಾಲಿಕೆ : ಮಹಾದೇವಪುರ ವಲಯ ಕಚೇರಿ, ಕೆ.ಆರ್ ಪುರಂ ಕಚೇರಿ

3.ಪಶ್ಚಿಮ ವಲಯ : ಆರ್.ಆರ್ ನಗರ ವಲಯ ಕಚೇರಿ, ಹಾಲಿ ಪಾಲಿಕೆ ಸೌಧ ಚಂದ್ರ ಲೇಔಟ್

4.ಬೆಂಗಳೂರು ಉತ್ತರ ನಗರ ಪಾಲಿಕೆ : ಹಾಲಿ ಯಲಹಂಕ ವಲಯ ಕಚೇರಿ, ಹಾಲಿ ದಾಸರಹಳ್ಳಿ ವಲಯ ಕಚೇರಿ

5.ಬೆಂಗಳೂರು ದಕ್ಷಿಣ ನಗರ ಪಾಲಿಕೆ : ಹಾಲಿ ದಕ್ಷಿಣ ವಲಯ ಕಚೇರಿ, ಹಾಲಿ ಬೊಮ್ಮನಹಳ್ಳಿ ವಲಯ ಕಚೇರಿ

ರಾಜ್ಯ ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 15 ಜನ ಐಎಎಸ್, 20 ಕ್ಕೂ ಹೆಚ್ಚು ಕೆಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಗಳ ಹುದ್ದೆಯನ್ನ ರಚನೆ ಮಾಡಿ ಆದೇಶಿಸಿದೆ. ಈ ಐದು ಪಾಲಿಕೆಗಳಿಗೂ 28 ವಿಧಾನಸಭಾ ಕ್ಷೇತ್ರಗಳನ್ನ ಹಂಚಿಕೆ ಮಾಡಿದೆ.

ಯಾವ ಪಾಲಿಕೆಗೆ ಎಷ್ಟೆಷ್ಟು ವಿಧಾನಸಭಾ ಕ್ಷೇತ್ರ ಹಂಚಿಕೆ?.. ಇಲ್ಲಿದೆ ಮಾಹಿತಿ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆ – 10 ವಿಧಾನಸಭಾ ಕ್ಷೇತ್ರ
ಬೆಂಗಳೂರು ಕೇಂದ್ರ ನಗರ ಪಾಲಿಕೆ – 7 ವಿಧಾನಸಭಾ ಕ್ಷೇತ್ರ
ಬೆಂಗಳೂರು ಪೂರ್ವ ನಗರ ಪಾಲಿಕೆ – 2 ವಿಧಾನಸಭಾ ಕ್ಷೇತ್ರ
ಬೆಂಗಳೂರು ಉತ್ತರ ನಗರ ಪಾಲಿಕೆ – 7 ವಿಧಾನಸಭಾ ಕ್ಷೇತ್ರ
ಬೆಂಗಳೂರು ದಕ್ಷಿಣ ನಗರ ಪಾಲಿಕೆ – 8 ವಿಧಾನಸಭಾ ಕ್ಷೇತ್ರ

Leave a Reply

error: Content is protected !!