PROTEST NEWS: ಕೊಪ್ಪಳ | “ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ : ಎಐಡಿಎಸ್‌ಒ  ಪ್ರತಿಭಟಿಸಿ ಸರ್ಕಾರಕ್ಕೆ ಒತ್ತಾಯ”

You are currently viewing PROTEST NEWS: ಕೊಪ್ಪಳ | “ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ : ಎಐಡಿಎಸ್‌ಒ  ಪ್ರತಿಭಟಿಸಿ ಸರ್ಕಾರಕ್ಕೆ ಒತ್ತಾಯ”

“ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲ ಬಗೆಹರಿಸಿ :  ಕೊಪ್ಪಳದಲ್ಲಿ ಎಐಡಿಎಸ್‌ಒ  ಪ್ರತಿಭಟಿಸಿ ಸರ್ಕಾರಕ್ಕೆ ಒತ್ತಾಯ”

 

 

ಪ್ರಜಾವೀಕ್ಷಣೆ ಡೆಸ್ಕ್‌ ನ್ಯೂಸ್‌ :

ಕೊಪ್ಪಳ : ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಗೊಂದಲ ಪರಿಹರಿಸಲು ಆಗ್ರಹಿಸಿ  ನಗರದ ಅಶೋಕ ವೃತ್ತದಲ್ಲಿಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (  ಎಐಡಿಎಸ್ಓ) ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿ ಆಕೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ಉದ್ದೇಶಿಸಿ ಎಐಡಿಎಸ್ಓ ನ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಹಯ್ಯಾಳಪ್ಪ ಮಾತನಾಡಿ, ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ ಎಂದರು.

ವಿದ್ಯಾರ್ಥಿಗಳ  ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ.  ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೇಂದು ಮನವಿ ಮಾಡಿದರು.

 

 

ನಂತರ ಎಐಡಿಎಸ್ಓ ರಾಜ್ಯ ಸಮಿತಿ ಸದಸ್ಯೆ ಸಿಂಧು.ಕೆ  ಮಾತನಾಡಿ, ಅತಿಥಿ ಉಪನ್ಯಾಸಕರಿಲ್ಲದೇ ಪದವಿ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಶೈಕ್ಷಣಿಕ ಸಮಸ್ಯೆಯನ್ನು ಹಾಗೂ ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಾಗಿರುವ ಗೊಂದಲವನ್ನು ರಾಜ್ಯ ಸರ್ಕಾರವು ಈ ಕೂಡಲೇ ಬಗೆಹರಿಸಬೇಕೆಂದು ವಿದ್ಯಾರ್ಥಿಗಳ ಪರವಾಗಿ ಒತ್ತಾಯಿಸಿದರು.

ಪ್ರತಿಭಟನೆಯ ನಂತರ ಜಿಲ್ಲಾಧಿಕಾರಿಯವರ ಮೂಲಕ ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳೋಳ್ಳಿ,  ಕಾರ್ಯಕರ್ತರಾದ ಪ್ರದೀಪ್, ಶರಣಪ್ಪ, ಅಪ್ಪಾಜಿ, ತಿರುಪತಿ, ಮತ್ತು ವಿದ್ಯಾರ್ಥಿಗಳಾದ ರುಕ್ಸನಾ ಬೇಗಂ, ಸಾವಿತ್ರಿ ,ತುಳಸಿ, ಆಕಾಶ್, ಹುಲಿಗಮ್ಮ ,ಲಕ್ಷ್ಮಿ, ನೇತ್ರಾ,  ದರ್ಶನ್, ಮಲ್ಲಪ್ಪ, ಸಂತೋಷ್ ಸೇರಿದಂತೆ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

error: Content is protected !!