You are currently viewing CRIME NEWS : “ಕಾಫಿ ನಾಡಿನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ! : ಸ್ಥಳೀಯರಲ್ಲಿ ಹೆಚ್ಚಿದ ಆತಂಕ”

CRIME NEWS : “ಕಾಫಿ ನಾಡಿನಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ! : ಸ್ಥಳೀಯರಲ್ಲಿ ಹೆಚ್ಚಿದ ಆತಂಕ”

ಚಿಕ್ಕಮಗಳೂರು |ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ! : ಸ್ಥಳೀಯರಲ್ಲಿ ಹೆಚ್ಚಿದ ಆತಂಕ”

 

 

ಪ್ರಜಾ ವೀಕ್ಷಣೆ ಡೆಸ್ಕ್ ನ್ಯೂಸ್ : 

ಚಿಕ್ಕಮಗಳೂರು : ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವಕನೊಬ್ಬ ಯುವತಿಗೆ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಆತಂಕಕಾರಿ ಘಟನೆ ಮೂಡಿಗೆರೆ ತಾಲ್ಲೂಕಿನ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ಶುಕ್ರವಾರ ನಡೆದಿದೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡ ಯುವತಿ ಕಾವ್ಯ (24) ಎನ್ನಲಾಗಿದೆ . ಪಗಾಲ್ ಪ್ರೇಮಿಯಿಂದ ಗಾಯಗೊಂಡಿರುವ ಯುವತಿ. ಕಳಸ ತಾಲ್ಲೂಕಿನ ಹೆಗ್ಗೋಡು ಮೂಲದ ಕಾವ್ಯ, ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.  

ಯುವತಿಗೆ ಕಲ್ಲಿನಿಂದ ಹಲ್ಲೆ ಮಾಡಿ, ತಲೆ ಮತ್ತು ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಆರೋಪಿ, ಕೊಪ್ಪ ತಾಲೂಕಿನ ಗುಡ್ಡತೋಟ ಮೂಲದವನಾಗಿದ್ದಾನೆ ಎನ್ನಲಾಗಿದೆ.

ಪ್ರೀತಿಯ ವಿಚಾರವಾಗಿ ಕಾವ್ಯ ಳು ಪ್ರೀತಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ, ನಡು ರಸ್ತೆಯಲ್ಲಿ ಯುವತಿ ಕಾವ್ಯಳ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ, ಚಾಕುವಿನಿಂದ ಇರಿದು ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ. 

ಗಂಭೀರವಾಗಿ ಗಾಯಗೊಂಡ ಕಾವ್ಯ ಳನ್ನು ಕಳಸದ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ. 

ಈ ಘಟನೆಯಿಂದ ಕಳಸ ಪಟ್ಟಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಆರೋಪಿಯ ಬಂಧನಕ್ಕಾಗಿ ಸ್ಥಳೀಯ ನಿವಾಸಿಗಳು ಒತ್ತಾಯಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!