You are currently viewing BIG NEWS : ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ! : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

BIG NEWS : ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ! : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

BIG NEWS : ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ! : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಪ್ರಜಾವಿಕ್ಷಣೆ ಡಿಜಿಟಲ್‌ ಡೆಸ್ಕ್‌: ‘ದರಿದ್ರ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ರಾಜ್ಯದಲ್ಲಿ ಹಿಂದೂಗಳಿಗೆ ಅಪಮಾನ, ಹಿಂದೂ ಭಾವನೆಗೆ ಧಕ್ಕೆ ಆಗುತ್ತಿದೆ. ಹಿಂದೂಗಳ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದರು.

ಈ ಘಟನೆ ಕುರಿತು ಪ್ರತಿಕ್ರಿಯೆ ನಡಿದ ಅವರು, ‘ಮದ್ದೂರಿನಲ್ಲಿ ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದು, ಸಣ್ಣ ಘಟನೆ ಎಂದು ಗೃಹ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಅನಿಸುವುದಾದರೆ, ಲಜ್ಜೆಗೆಟ್ಟ ವರ್ತನೆ ರಾಜ್ಯ ಸರಕಾರದ್ದು ಎಂದು ಖಂಡಿಸಿದರು.

ಮದ್ದೂರಿನಲ್ಲಿ ಇವತ್ತು ಹೆಣ್ಮಕ್ಕಳ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ದೇಶಾದ್ಯಂತ ಗಣೇಶ ಉತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಮಹಾರಾಷ್ಟ್ರ ಸೇರಿ ಎಲ್ಲ ರಾಜ್ಯಗಳಲ್ಲಿ ಗಣೇಶ ಹಬ್ಬ, ವಿಗ್ರಹ ವಿಸರ್ಜನೆ ವಿಜೃಂಭಣೆಯಿಂದ ನಡೆಯುತ್ತದೆ. ಕರ್ನಾಟಕದಲ್ಲಿ ಯಾಕೆ ಗಲಾಟೆ ಆಗುತ್ತಿದೆ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಈದ್ ಮಿಲಾದ್ ನಡೆದಾಗ ಎಲ್ಲಾದರೂ ಗಲಾಟೆ ಆಗಿದೆಯೇ? ಕರ್ನಾಟಕದಲ್ಲೂ ಹಿಂದೂಗಳು ಶಾಂತಿಪ್ರಿಯರು, ಎಲ್ಲ ಧರ್ಮ, ಎಲ್ಲ ಸಮುದಾಯಗಳನ್ನು ಪ್ರೀತಿಸುವ ಕೆಲಸವನ್ನು ಹಿಂದೂ ಸಮಾಜ ಮಾಡುತ್ತಿದೆ. ಆದರೆ, ರಾಜ್ಯ ಸರಕಾರ ನಡೆಸುವ ಕಾಂಗ್ರೆಸ್ ಪಕ್ಷ, ಮುಖ್ಯಮಂತ್ರಿಗಳು ಇದನ್ನು ರಾಜ್ಯದ ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.

Prajavikshane

Chandru R Bhanapaur

Leave a Reply

error: Content is protected !!