You are currently viewing BIG NEWS : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿ ಸಂಗ್ರಹಣೆ : ಸಿಎಂ ಸಿದ್ದರಾಮಯ್ಯ

BIG NEWS : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿ ಸಂಗ್ರಹಣೆ : ಸಿಎಂ ಸಿದ್ದರಾಮಯ್ಯ

ಪ್ರಜಾವೀಕ್ಷಣೆ ಸುದ್ದಿ :

BIG NEWS : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿ ಸಂಗ್ರಹಣೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇದೇ ಸೆಪ್ಟೆಂಬರ್.22 ರಿಂದ ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಅತ್ಯುನ್ನತ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿಯನ್ನು ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಆಯೋಗವೂ ವೈಜ್ಞಾನಿಕವಾಗಿ, ಯಾವುದೇ ಲೋಪವಾಗದಂತೆ ಸಮೀಕ್ಷೆ ಕಾರ್ಯ ನಡೆಸಬೇಕು. ನಿಗದಿತ ಅವಧಿಯ ಒಳಗಾಗಿ ಸಮೀಕ್ಷೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಬೇಕು. ನ್ಯಾ. ನಾಗಮೋಹನ ದಾಸ್ ಅವರು ಒಳಮೀಸಲಾತಿ ಸಮೀಕ್ಷೆಗೆ ವಿಶೇಷ ತಂತ್ರಜ್ಞಾನ ಬಳಸಿಕೊಂಡ ರೀತಿಯಲ್ಲಿ ಈ ಸಮೀಕ್ಷೆಯನ್ನು ಸಹ ಕೈಗೊಳ್ಳಲಾಗುವುದು ಎಂದರು.

ಪ್ರತಿಯೊಂದು ಮನೆಯ ವಿದ್ಯುತ್ ಮೀಟರ್ ಆಧಾರದಲ್ಲಿ ಮನೆಯ ಜಿಯೋ ಟ್ಯಾಗ್ ಮಾಡಿ UHID ವಿಶೇಷ ಸಂಖ್ಯೆಯನ್ನು ನಮೂದಿಸಿ, ಈಗಾಗಲೇ 1.55 ಲಕ್ಷ ಮನೆಗಳಿಗೆ ಸಂಖ್ಯೆಯನ್ನು ಅಳವಡಿಸಲಾಗಿದೆ. ವಿದ್ಯುತ್ ಸಂಪರ್ಕ ಇಲ್ಲದ ಮನೆಗಳ ಸಮೀಕ್ಷೆಯನ್ನು ಸಹ ಮಾಡಲಾಗುವುದು. ಸಮೀಕ್ಷೆ ಸಂದರ್ಭದಲ್ಲಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡುವ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿದರು.

Prajavikshane

Chandru R Bhanapaur

Leave a Reply

error: Content is protected !!