SPECIAL DAY : ಇಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ವಿವಿಧ ಸ್ಪರ್ಧೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ!

You are currently viewing SPECIAL DAY : ಇಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ವಿವಿಧ ಸ್ಪರ್ಧೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ!

ಪ್ರಜಾವೀಕ್ಷಣೆ ಸುದ್ದಿ :

SPECIAL DAY : ಇಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ : ವಿವಿಧ ಸ್ಪರ್ಧೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ!

ಬೆಂಗಳೂರು : ಇಂದು ರಾಜ್ಯಾಧ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುವಂತೆ ರಾಜ್ಯ ಸರ್ಕಾರ ಅಧಿಕೃತವಾದ ಆದೇಶ ಮಾಡಿದೆ.

ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಪ್ರಜಾಪ್ರಭುತ್ವದ ತತ್ವಗಳನ್ನು ಉತ್ತೇಜಿಸಲು ಮತ್ತು ಜಾಗತಿಕವಾಗಿ ಅದರ ಪ್ರಾಮುಖ್ಯತೆಯ ಬಗ್ಗೆ ಜಾಗೃತಿ ಮೂಡಿಸಲು ಪುಜಾಪ್ರಭುತ್ವದ ಆಡಳಿತ, ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮದ ಮೌಲ್ಯಗಳನ್ನು ಬಲಪಡಿಸಲು 2007ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಪ್ರತಿ ವರ್ಷ “ಸೆಪ್ಟೆಂಬರ್ 15” ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಇದು ಅದರ ಹಿನ್ನಲೆಯಾಗಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾರ್ಮಿಕ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಮತ್ತು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB), ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (ಕೆಎಂಎಫ್), ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್), ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್‌ಟಿಡಿಸಿ), ಕರ್ನಾಟಕ ರಾಜ್ಯ ರೇಷ್ಮೆ ನಿಗಮ ನಿಯಮಿತ(ಕೆಎಸ್‌ಐಸಿ)ಗಳ ಸಹಭಾಗಿತ್ವದಲ್ಲಿ “ನನ್ನ ಮತ ನನ್ನ ಹಕ್ಕು” (My Vote My Right) ಎಂಬ ಧೇಯ ವಾಕ್ಯದೊಂದಿಗೆ ರಾಜ್ಯ, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಇಂದು “ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ”ಯನ್ನು ಅರ್ಥಪೂರ್ಣವಾಗಿ ಆಚರಿಸಲು ಉದ್ದೇಶಿಸಲಾಗಿದೆ.

ಹಾಗಾಗಿ ಇಂದು ಆಯೋಜಿಸಲಾಗುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ದಿನದಂದು ವಿವಿಧ ಸ್ಪರ್ಧೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಂದ ಚಾಲನೆ ನೀಡಲಾಗುತ್ತದೆ. ಎಲ್ಲಾ ಸ್ಪರ್ಧೆಗಳನ್ನು ಅಕ್ಟೋಬರ್ 31ರೊಳಗೆ ತಾಲ್ಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳನ್ನು ಮುಕ್ತಾಯಗೊಳಿಸಬೇಕು ಎಂದು ಸೂಚನೆ ಇದೆ.

Leave a Reply

error: Content is protected !!