BIG NEWS : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕಲ್ಯಾಣ ಕರ್ನಾಟಕದ ಜನತೆಗೆ ಸಿಹಿಸುದ್ದಿ..!

You are currently viewing BIG NEWS : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕಲ್ಯಾಣ ಕರ್ನಾಟಕದ ಜನತೆಗೆ ಸಿಹಿಸುದ್ದಿ..!

ಪ್ರಜಾವೀಕ್ಷಣೆ ಸುದ್ದಿ :

BIG NEWS : ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಕಲ್ಯಾಣ ಕರ್ನಾಟಕದ ಜನತೆಗೆ ಸಿಹಿಸುದ್ದಿ..!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ಕಲ್ಯಾಣ ಕರ್ನಾಟಕದ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನಾಳೆ ಅತ್ಯಾಧುನಿಕ ಸೌಲಭ್ಯಗಳು ಒಳಗೊಂಡ 32 ನೂತನ ಆಂಬುಲೆನ್ಸ್ ಗಳ ಸೇವೆಗೆ ಅರ್ಪಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ “ಎಕ್ಸ್‌” ಖಾತೆಯ ಮೂಲಕ ಮಾಹಿತಿ ನೀಡಿದ್ದು, “ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ತುರ್ತು ಆರೋಗ್ಯ ಸೇವೆಗಳನ್ನು ಒದಗಿಸಲು ಹಾಗೂ ಸಕಾಲದಲ್ಲಿ ಚಿಕಿತ್ಸೆಯನ್ನು ಖಾತ್ರಿಪಡಿಸಲು ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ 32 ನೂತನ ಆಂಬುಲೆನ್ಸ್ಗಳನ್ನು ನಾಳೆ ಜನ ಸೇವೆಗೆ ಅರ್ಪಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

“ಕಳೆದ ಎರಡು ವರ್ಷಗಳ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜನರ ಆರೋಗ್ಯ ಮಟ್ಟ ಸುಧಾರಿಸುವ ಹಲವು ಯೋಜನೆಗಳು ಜಾರಿಗೊಂಡಿದೆ. ಜೊತೆಗೆ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಆಸ್ಪತ್ರೆ, ಕಟ್ಟಡಗಳ ನವೀಕರಣ ಸೇರಿದಂತೆ ಹೊಸ ಆರೋಗ್ಯ ಕೇಂದ್ರಗಳು, ಸಮುದಾಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸುವ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಈ ಮೂಲಕ ಕಲ್ಯಾಣದಲ್ಲಿ ಕಲ್ಯಾಣ ಕಾರ್ಯಗಳು ಆರಂಭಗೊಂಡಿದೆ” ಎಂದು ತಿಳಿಸಿದ್ದಾರೆ.

https://x.com/CMofKarnataka/status/1967837665841004709

 

Leave a Reply

error: Content is protected !!