You are currently viewing BIG NEWS : ಸರ್ಕಾರಿ ಆಸ್ಪತ್ರೆಯ ಶೌಚಗೃಹದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.! : ದೂರು ದಾಖಲು.!

BIG NEWS : ಸರ್ಕಾರಿ ಆಸ್ಪತ್ರೆಯ ಶೌಚಗೃಹದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.! : ದೂರು ದಾಖಲು.!

ಪ್ರಜಾವೀಕ್ಷಣೆ ಸುದ್ದಿ :

BIG NEWS : ಸರ್ಕಾರಿ ಆಸ್ಪತ್ರೆಯ ಶೌಚಗೃಹದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ.! : ದೂರು ದಾಖಲು.!

ದಾವಣಗೆರೆ : ದಾವಣಗೆರೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಶೌಚಗೃಹದ ಬಕೆಟ್ ನಲ್ಲಿ ನವಜಾತ ಹೆಣ್ಣು ಶಿಶುವೊಂದು ಪತ್ತೆ ಆಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಜಿಲ್ಲೆಯ ಹೊನ್ನಾಳಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆ ಸಿಬ್ಬಂದಿ ಮಗುವನ್ನು ರಕ್ಷಿಸಿದ್ದಾರೆ. ಆಗ ತಾನೆ ಹುಟ್ಟಿದ ಶಿಶುವನ್ನು ಯಾರೋ ಬಟ್ಟೆಯಲ್ಲಿ ಸುತ್ತಿ ಶೌಚಗೃಹದ ಬಕೆಟ್‌ನಲ್ಲಿ ಹಾಕಿ ಹೋಗಿದ್ದು, ಮಗು ಅಳುವ ಶಬ್ದ ಕೇಳಿದ ಸ್ವಚ್ಛತಾ ಸಿಬ್ಬಂದಿ ಮೇಲಧಿಕಾರಿಗಳಿಗೆ ತಿಳಿಸಿದ್ದಾರೆ.

ಬಳಿಕ ವೈದ್ಯರು ಹಾಗೂ ಇತರ ಸಿಬ್ಬಂದಿ ಬಂದು ನೋಡಿ ಮಗುವನ್ನು ರಕ್ಷಣೆ ಮಾಡಿದ್ದಾರೆ. ಈ ಕುರಿತು ಹೊನ್ನಾಳಿ ಠಾಣೆಯಲ್ಲಿ ದೂರು ನೀಡಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!