ಮುದಗಲ್ಲ :- ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ :ಅಮರೇಶ ಮಡಿವಾಳ..

ಮುದಗಲ್ಲ ವರದಿ..

ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ :ಅಮರೇಶ ಮಡಿವಾಳ..

ಮುದಗಲ್ಲ :- ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಮುದಗಲ್ಲಿನ ಎಸ್ ವಿ ಎಮ್ ಪ್ರಾಢ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಣೆ ಮಾಡಿದ ಅಮರೇಶ ಮಡಿವಾಳ ಅವರು ನಂತರ ಮಾತನಾಡಿರು
ಭಾರತಕ್ಕೆ ಆಗಸ್ಟ್ 15 ಸ್ವಾತಂತ್ರ್ಯ ದಿನದ ಸಂಭ್ರಮವಾದರೆ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಯ ಜನರಿಗೆ ಮಾತ್ರ ಸೆಪ್ಟೆಂಬರ್ 17 ಸ್ವಾತಂತ್ರ್ಯ ದಿನದ ಸಂಭ್ರಮ. ಹೌದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 13 ತಿಂಗಳು 2 ದಿನದ ನಂತರ ಕಲ್ಯಾಣ ಕರ್ನಾಟಕ ಭಾಗಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಕಲ್ಯಾಣ ಕರ್ನಾಟಕ ಭಾಗದ ಜನರು ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದರೇ, ನಂತರ ನಮ್ಮದೇ ದೇಶದ ಹೈದರಾಬಾದ್ ನಿಜಾಮನ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಪಡೆಯಬೇಕಾಯಿತು. ಕಲ್ಯಾಣ ಕರ್ನಾಟಕ ಸೇರಿದಂತೆ ಹೈದ್ರಾಬಾದ್ ಪ್ರಾಂತ್ಯಕ್ಕೆ ಸ್ವಾತಂತ್ರ್ಯ ಸಿಗಲು ಕಾರಣೀಭೂತರಾಗಿದ್ದು, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಸರ್ದಾರ್ ನಾವು ನೆನಪು ಮಾಡಿಕೊಳ್ಳಬೇಕು ಜನರ ಮೇಲೆ ಹಿಂಸಾಚಾರ ನಡೆಸುತ್ತಿದ್ದ ನಿಜಾಮರ ಆಡಳಿತಕ್ಕೆ ಪೂರ್ಣ ವಿರಾಮ ಹಾಕಲು ನಿರ್ಧರಿಸಿದ ಉಕ್ಕಿನ ಮನುಷ್ಯ ಅಂದಿನ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ‘ಆಪರೇಷನ್ ಪೋಲೋ’ ಮಿಲಿಟರಿ ಕಾರ್ಯಾಚರಣೆ ನಡೆಸಿದರು. ಇದರ ಫಲವಾಗಿ 1948, ಸೆಪ್ಟೆಂಬರ್ 17 ರಂದು ನಿಜಾಮರ ಆಳ್ವಿಕೆ ಕೊನೆಗೊಂಡಿತು ಕಲ್ಯಾಣ ಕರ್ನಾಟಕ ಭಾಗ ವಿಮೋಚನೆಗೊಂಡು ಅಖಂಡ ಭಾರತದಲ್ಲಿ ಸೇರ್ಪಡೆಯಾಯಿತು. ಮೊದ ಮೊದಲು ಕಲ್ಯಾಣ ಕರ್ನಾಟಕ ವಿಮೋಚನಾ ದಿನವನ್ನು ಕೆಲವು ಸಂಘಟನೆಗಳಷ್ಟೇ ಆಚರಿಸುತ್ತಿದ್ದವು. 2002ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ, ಕೃಷ್ಣ, ಈ ಮಹತ್ವದ ದಿನವನ್ನು ಸರಕಾರದ ವತಿಯಿಂದಲೇ ಆಚರಿಸಲು ನಿರ್ಧರಿಸಿದರು.

ಅಂದಿನಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನದಂದು ರಾಜ್ಯದ ಮುಖ್ಯಮಂತ್ರಿಗಳು ಧ್ವಜಾರೋಹಣ ಮಾಡುವ ಪರಂಪರೆ ಇದೆ. ಇಷ್ಟೆಲ್ಲ ಹೋರಾಟ ನಡೆಸಿದ ಈ ಭಾಗ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಯಾಗಿದ್ದು.ಇನ್ನೂ ಸಾಕಷ್ಟು ಅಭಿವೃದ್ಧಿಯಾಗಬೇಕಾಗಿದೆ‌.. ಸಂವಿಧಾನದ 371J ನೇ ಕಲಂನಿಂದ ಈ ಭಾಗದಲ್ಲಿ ಇನ್ನೂ ಅಭಿವೃದ್ಧಿಯಾಗಬೇಕಿದೆ ಎಂದರು

2019ರಿಂದ ಕಲ್ಯಾಣ ಕರ್ನಾಟಕ ಉತ್ಸವ’ ಎಂಬ ಹೆಸರಿನಿಂದ ಪ್ರತಿವರ್ಷ ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ವಿಭಾಗದ ಆರು ಜಿಲ್ಲೆಗಳಾದ ಬೀದರ್, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಸರ್ಕಾರಿ ಕಛೇರಿಗಳು ಸೇರಿದಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲಾಗುತ್ತದೆ ಕಲ್ಯಾಣ ಕರ್ನಾಟಕದ ಹೋರಾಟಗಾರರಿಗೆ ನಮನ ಸಲ್ಲಿಸಲಾಗುತ್ತದ. ಎಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಎಲ್ಲರಿಗೂ ಶುಭಾಶಯಗಳ ಎಂದರು

ಈ ಸಂದರ್ಭದಲ್ಲಿ ಸಂಗಮೇಶ
ಸರಗಣಾಚಾರಿ, ಮುಖ್ಯ ಗುರುಗಳು,
ಚಂದ್ರಶೇಖರ ನಾಯಕ್
ಸಂಜೀವ್ ಬಾಕಲಿ,ಶಿಕ್ಷಕರು ಉಪಸ್ಥಿತರಿದ್ದರು..

ವರದಿ:- ಮಂಜುನಾಥ ಕುಂಬಾರ

Leave a Reply

error: Content is protected !!