CRIME NEWS : ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!!
ಬಾಗಲಕೋಟೆ: ನಗರದ ಖಾಸಗಿ ಪಿಜಿಯೊಂದರಲ್ಲಿ ಯುವತಿಯೊಬ್ಬಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನಗರದ ವಿದ್ಯಾಗಿರಿಯ ಖಾಸಗಿ ಪಿಜಿಯೊಂದರಲ್ಲಿ ಸಾವಿಗೀಡಾದ ವಿದ್ಯಾರ್ಥಿನಿಯನ್ನು ಸುನಗ ತಾಂಡಾದ ಸೀಮಾ ರಾಠೋಡ (ವಯಸ್ಸು -17) ಎಂದು ಗುರುತಿಸಲಾಗಿದೆ. ನಗರದ ಪಿಯು ಕಾಲೇಜೊಂದರಲ್ಲಿ ಪ್ರಥಮ ವರ್ಷದ ಪಿಯುಸಿ ಓದುತ್ತಿದ್ದಳು ಎಂದು ತಿಳಿದು ಬಂದಿದೆ.
ಪಿಜಿಯಲ್ಲಿ ಕೆಲವು ವಿದ್ಯಾರ್ಥಿನಿಯರು ರೂಮ್ ಒಳಗೆ ಹೋಗುತ್ತಿದ್ದಂತೆ ಯುವತಿಯ ಮೃತದೇಹ ಸ್ಲ್ಯಾಬ್‍ನ ಹುಕ್‍ನಲ್ಲಿ ನೇತಾಡುತ್ತಿರುವುದನ್ನು ಕಂಡು ಕಿರುಚಾಡುತ್ತ ಹೊರಗೆ ಓಡಿ ಬಂದಿದ್ದಾರೆ. ಬಳಿಕ ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಯುವತಿಯ ಪೋಷಕರು ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಯೇ ಸೂಕ್ತ ತನಿಖೆ ಮಾಡಿ ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಈ ದೃಶ್ಯ ವಿದ್ಯಾರ್ಥಿನಿಯರು ಹೊರಗೆ ಬಂದಿದ್ದನ್ನು ಕಂಡು, ಪಿಜಿಯ ಭದ್ರತಾ ಸಿಬ್ಬಂದಿ ಬಂದು ನೋಡಿದ್ದಾರೆ. ಬಳಿಕ ನೇಣು ಬಿಚ್ಚಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಜಿಲ್ಲಾಸ್ಪತ್ರೆ ವೈದ್ಯರು ಪರೀಕ್ಷಿಸಿ ಯುವತಿ ಮೃತಪಟ್ಟಿದ್ದನ್ನು ಖಚಿತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಯುವತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು, ನಮಗೆ ಕರೆ ಮಾಡಿ ಪಿಟ್ಸ್ ಬಂದಿದೆ ಎಂದಿದ್ದರು. ಈಗ ನೇಣು ಹಾಕಿಕೊಂಡಿದ್ದಾಳೆ ಎನ್ನುತ್ತಿದ್ದಾರೆ ಎಂದು ಪಿಜಿ ಸಿಬ್ಬಂದಿಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ನವನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನವನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.