BREAKING NEWS : ಯಲ್ಲಾಲಿಂಗನ ಕೊಲೆ ಪ್ರಕರಣ : ಆರೋಪಿಗಳಿಗೆ ನಿರ್ದೋಷಿ ಎಂದ ನ್ಯಾಯಾಲಯ..!
ಕೊಪ್ಪಳ : ಕಳೆದ ಕೇಲವು ವರ್ಷಗಳ ಹಿಂದೆ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಪ್ರಕರಣವಾಗಿದ್ದು, ಇದೀಗ ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈ ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಲಯ ನಿರ್ದೋಷಿ ಎಂದು ಖುಲಾಸೆ ನೀಡದೆ.
‘ರಾಜಕೀಯ ಷಡ್ಯಂತ್ರದ ಕಾರಣಕ್ಕೆ ಒಂಬತ್ತು ಜನರ ಮೇಲೆ ಕೊಲೆ ಆರೋಪ ಹೊರಿಸಲಾಗಿತ್ತು. ಇದು ನಿರಾಧಾರ ಎಂದು ನ್ಯಾಯಾಲಯ ಹೇಳಿದ್ದು, ಯಲ್ಲಾಲಿಂಗನದ್ದು ಕೊಲೆ ಅಲ್ಲ, ಅದು ಆತ್ಮಹತ್ಯೆ ಎಂದು ಅವರ ಸ್ವಂತ ಸಹೋದರನೇ ಹೇಳಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿ ಕೋರ್ಟ್ ಆರೋಪಿಗಳನ್ನು ನಿರ್ದೋಷಿ ಎಂದು ಹೇಳಿದೆ ಎಂದು ಆರೋಪಿಗಳ ಪರ ವಕೀಲ ಗಂಗಾಧರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಕಾಂಗ್ರೆಸ್ ಮುಖಂಡ ಹನುಮೇಶ ನಾಯಕ, ಬಾಳನಗೌಡ, ಕಾಡಮಂಜ, ಮಹಾಂತೇಶ ನಾಯಕ, ಮನೋಜ ಪಾಟೀಲ್, ನಂದೀಶ, ಪರಶುರಾಮ, ಯಮನೂರಪ್ಪ ಹಾಗೂ ದುರ್ಗಪ್ಪ ಅವರ ಮೇಲೆ ಕೊಲೆ ಆರೋಪ ಕೇಳಿ ಬಂದಿತ್ತು.
ಘಟನೆ ವಿವರ : ಕನಕಗಿರಿ ತಾಲ್ಲೂಕಿನ ಕನಕಾಪುರ ಗ್ರಾಮದ ವಿದ್ಯಾರ್ಥಿ ಯಲ್ಲಾಲಿಂಗ ತಮ್ಮ ಗ್ರಾಮದಲ್ಲಿ ನಡೆದಿದ್ದ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದ. ಇದಾದ ಬಳಿಕ 2015ರ ಜನವರಿ 11ರಂದು ಕೊಪ್ಪಳ ರೈಲ್ವೆ ನಿಲ್ದಾಣದಲ್ಲಿ ಯಲ್ಲಾಲಿಂಗನ ಮೃತದೇಹ ಪತ್ತೆಯಾಗಿತ್ತು.
ಇದು ಮೊದಲು ಆತ್ಮಹತ್ಯೆ ಎಂದು ಶಂಕಿಸಲಾಗಿದ್ದರೂ ಬಳಿಕ ಕೊಲೆ ಎಂದು ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದು ಇಂದು ಸಚಿವ ಶಿವರಾಜ ತಂಗಡಗಿ ಆಪ್ತ ಹನಮೇಶ ನಾಯಕ ಸೇರಿ 9 ಜನರ ವಿರುದ್ಧ ಇಲ್ಲಿ ಪ್ರಕರಣ ದಾಖಲಾಗಿತ್ತು. ಯಲ್ಲಾಲಿಂಗನ ಸಾವಿಗೆ ನ್ಯಾಯ ಒದಗಿಸುವಂತೆ ದೊಡ್ಡ ಮಟ್ಟದಲ್ಲಿ ಹೋರಾಟಗಳು ಕೂಡ ನಡೆದಿದ್ದರಿಂದ ರಾಜ್ಯ ಮಟ್ಟದಲ್ಲಿ ಸದ್ದು ಮಾಡಿ ಸಚಿವ ಶಿವರಾಜ ತಂಗಡಗಿ ಸಂಪುಟದಿಂದ ಹೊರಬೀಳುವಂತಾಗಿತ್ತು. ಸುದೀರ್ಘ ಹತ್ತು ವರ್ಷಗಳ ಕಾಲ ವಿಚಾರಣೆ ನಡೆದಿದ್ದ ಈ ಪ್ರಕರಣ ಈಗ ನ್ಯಾಯಾಲಯದ ಈ ಆದೇಶ ನೀಡಿದೆ.
ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಜಾಮೀನು ದೊರೆತಿತ್ತು. 2021ರಲ್ಲಿ ಆರೋಪಿ ಮಹಾಂತೇಶ್ ನಾಯಕನ ಮದುವೆಯಲ್ಲಿ ಪೊಲೀಸರು ಭಾಗವಹಿಸಿದ್ದರಿಂದ ಪ್ರಕರಣ ಮತ್ತೆ ಮುನ್ನಲೆಗೆ ಬಂದಿತ್ತು.