You are currently viewing KOPPAL BIG NEWS : “ವಿವಿಧ ಹುದ್ದೆಗಳ ಭರ್ತಿಗೆ ಆಗ್ರಹಿಸಿ :”ನಾಳೆ ಕೊಪ್ಪಳದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೃಹತ್‌ ಪ್ರತಿಭಟನೆ ಯಶಸ್ವಿಗೊಳಿಸಲು ಶರಣು ಪಾಟೀಲ್‌ ಕರೆ”

KOPPAL BIG NEWS : “ವಿವಿಧ ಹುದ್ದೆಗಳ ಭರ್ತಿಗೆ ಆಗ್ರಹಿಸಿ :”ನಾಳೆ ಕೊಪ್ಪಳದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೃಹತ್‌ ಪ್ರತಿಭಟನೆ ಯಶಸ್ವಿಗೊಳಿಸಲು ಶರಣು ಪಾಟೀಲ್‌ ಕರೆ”

“ನಾಳೆ ಕೊಪ್ಪಳದಲ್ಲಿಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೃಹತ್‌ ಪ್ರತಿಭಟನೆ ಯಶಸ್ವಿಗೊಳಿಸಲು ಶರಣು ಪಾಟೀಲ್‌ ಕರೆ

• ಪ್ರಜಾ ವೀಕ್ಷಣೆ ನ್ಯೂಸ್‌, ಕೊಪ್ಪಳ: 

 ಕೇಂದ್ರ ,ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ   ಹುದ್ದೆಗಳು ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನಾಳೆ ಸೋಮವಾರ ನಗರದ ಅಶೋಕ ವೃತ್ತದಲ್ಲಿ ಬೆಳ್ಳಗ್ಗೆ 11ಗಂಟೆಗೆ  ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೃಹತ್‌ ಪ್ರತಿಭಟನೆ ನಡೆಸಲು  ತೀರ್ಮಾನಿಸಲಾಗಿದೆ ಎಂದು ಸಮಿತಿ ಜಿಲ್ಲಾ  ಸಂಚಾಲಕ ಶರಣು ಪಾಟೀಲ್‌ ಅವರು ತಿಳಿಸಿದರು.

ಈ ಕುರಿತು  ಭಾನುವಾರ ಪ್ರಜಾ ವೀಕ್ಷಣೆ ಡಿಜಿಟಲ್‌ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾಳೆ ಇಡೀ ರಾಜ್ಯಾದ್ಯಂತ ಉದ್ಯೋಗಕಾಂಕ್ಷಿ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಅದೇ ರೀತಿ ಕೊಪ್ಪಳದಲ್ಲಿ ಸಹ ಈ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಹೀಗಾಗಿ ಉದ್ಯೋಗಕಾಂಕ್ಷಿಗಳು ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ  ಸಿಕ್ಕಿದೆ. ಆದ ಕಾರಣ ಎಲ್ಲರೂ ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.

ಎಲ್ಲಾ ಹುದ್ದೆಗಳ ನೇಮಕಾತಿಯಲ್ಲಿ ಐದು ವರ್ಷಗಳ ಸಡಿಲಿಕೆ ನೀಡಬೇಕು. ನೇಮಕಾತಿಯಲ್ಲಿ ಭ್ರಷ್ಟಾಚಾರ ತಡೆಗಟ್ಟಿ, ಪಾರದರ್ಶಕತೆಯನ್ನು ಕಾಪಾಡಿಬೇಕು. ಪೊಲೀಸ್ ಕಾನ್ಸೆಬಲ್‌ ವಯೋಮಿತಿ (GM -30. SC,ST, OBC- 33) ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಇತ್ತೀಚೆಗೆ ಕೆ.ಇ.ಎ. ಹೊರಡಿಸಿರುವ ನೋಟಿಫಿಕೇಶನ್‌ನಲ್ಲಿ ನಿಗದಿಪಡಿಸಿರುವ ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕೆಂದು ಈ  ಬೃಹತ್‌ ಪ್ರತಿಭಟನೆ ನಡೆಸಿ  ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಕೇಂದ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಲಾಗುವದು ಎಂದರು.

 

Prajavikshane

Chandru R Bhanapaur

Leave a Reply

error: Content is protected !!