You are currently viewing LOCAL NEWS : ಹೇರೂರು ಗ್ರಾಮದಲ್ಲಿ  ಆರ್‌ಎಸ್‌ಎಸ್‌ ಶತಮಾನೋತ್ಸವ ಆಚರಣೆ 

LOCAL NEWS : ಹೇರೂರು ಗ್ರಾಮದಲ್ಲಿ  ಆರ್‌ಎಸ್‌ಎಸ್‌ ಶತಮಾನೋತ್ಸವ ಆಚರಣೆ 

LOCAL NEWS : ಹೇರೂರು ಗ್ರಾಮದಲ್ಲಿ  ಆರ್‌ಎಸ್‌ಎಸ್‌ ಶತಮಾನೋತ್ಸವ ಆಚರಣೆ 

ಗಂಗಾವತಿ : ರಾಷ್ಟ್ರೀಯ ಸ್ವಯಂ ಸೇವಾ ಸಂಘ ಆರ್‌ಎಸ್‌ಎಸ್‌ನ ಶತಮಾನೋತ್ಸವ ಸಂಭ್ರಮದ ಅಂಗವಾಗಿ ಹೇರೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರ್ ಎಸ್ ಎಸ್  ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ವೇಳೆ ಭಾರತಾಂಬೆ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರ್ಯನಾರಾಯಣ ಇವರು ವಹಿಸಿಕೊಂಡಿದ್ದರು.

ವಿಶೇಷ ಬೋಧಕರು ನಾಗರಾಜ್ ಗುತ್ತೇದಾರ್ ವಕೀಲರು ಮಾತನಾಡಿ ರಾಷ್ಟೀಯ ಸ್ವಯಂಸೇವಕ ಸಂಘದ ನೂರು ವರ್ಷಗಳ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ. 1925 ರ ವಿಜಯದಶಮಿಯಂದು ಆರಂಭಗೊಂಡ ಆರ್‌ಎಸ್‌ಎಸ್‌ನ ಈ ಪಯಣವು ರಾಷ್ಟ್ರೀಯ ಹಿತಾಸಕ್ತಿಗಾಗಿ ತ್ಯಾಗ, ಶಿಸ್ತು, ಸೇವೆ ಮತ್ತು ಸಮರ್ಪಣೆಯ ಜೀವಂತ ಕಥೆಯಾಗಿದೆ ಎಂದು ಹೇಳಿದರು.

ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ 60ಕ್ಕೂ ಹೆಚ್ಚು ಸ್ವಯಂ ಸೇವಕರು ಗಣವೇಷಧಾರಿಗಳಾಗಿ ಅತ್ಯಂತ ಶಿಸ್ತಿನಿಂದ ನಮಸ್ತೇ ಸದಾ ವತ್ಸಲೇ ಗೀತೆಯನ್ನು ಹಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹನುಮೇಶ್ ಗೌಡ ಮಾಲಿಪಾಟೀಲ್, ಅಯ್ಯನ ಗೌಡ ಹೇರೂರು, ಅಂಬರೀಶ್ ಬೇವಿನಾಳ, ಶಿವು, ಹನುಮೇಶ್ ಗೌಡ, ಕನಕಪ್ಪ ಮೇಟಿ, ಹೇರೂರು ಗ್ರಾಮದ ಗುರು ಹಿರಿಯರು ಮುಖಂಡರು ಉಪಸ್ಥಿತರಿದ್ದರು.

Leave a Reply

error: Content is protected !!