BREAKING : ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ದಾಳಿ…!: ಶಿರಸ್ತೇದಾರ,ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಬಂಧನ..!

You are currently viewing BREAKING : ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ದಾಳಿ…!: ಶಿರಸ್ತೇದಾರ,ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಬಂಧನ..!

ಪ್ರಜಾ ವೀಕ್ಷಣೆ ಸುದ್ದಿ :

BREAKING : ತಹಶೀಲ್ದಾರ್ ಕಚೇರಿಯಲ್ಲಿ ಲೋಕಾಯುಕ್ತ ದಾಳಿ…!: ಶಿರಸ್ತೇದಾರ,ಇಬ್ಬರು ದ್ವಿತೀಯ ದರ್ಜೆ ಸಹಾಯಕರ ಬಂಧನ..!

ಹಾವೇರಿ : ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ 12 ಸಾವಿರ ಲಂಚದ ಹಣವನ್ನು ಪಡೆಯುತ್ತಿರುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಮೂಲಕ ಶಿರಸ್ತೇದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಾವೇರಿ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನವೀನ ಬಸವನಗೌಡ ಪಾಟೀಲ್ ಎಂಬುವರು ಪಹಣಿ ಪತ್ರ ಅಂದರೆ ಆರ್ ಟಿ ಸಿ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರರ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಈ ತಿದ್ದುಪಡಿ ಮಾಡಲು ಹಾನಗಲ್ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರರು, ಇಬ್ಬರು ಎಸ್ ಡಿ ಎ 12ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಹಿನ್ನಲೆಯಲ್ಲಿ ನವೀನ ಬಸವನಗೌಡ ಪಾಟೀಲ್ ಎಂಬುವರು ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಬನ್ನಲ್ಲೇ ಇಂದು ಹಣ ಸ್ವೀಕರಿಸುತ್ತಿದ್ದಾಗ ಹಾವೇರಿ ತಹಶೀಲ್ದಾರರ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಹಣ ಸ್ವೀಕರಿಸುತ್ತಿದ್ದಾಗಲೇ ಹಾನಗಲ್ ತಹಶೀಲ್ದಾರರ ಕಚೇರಿಯಲ್ಲಿ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್ ಡಿಎ ಗೂಳಪ್ಪ ಮನಗೂಳಿ ಹಾಗೂ ಕೃತ್ಯಕ್ಕೆ ಸಹಕರಿಸಿದಂತ ಮತ್ತೊಬ್ಬ ಎಸ್ ಡಿಎ ಶಿವಾನಂದ ಬಡಿಗೇರ ಎಂಬುವರನ್ನು ಬಂಧಿಸಿಸಲಾಗಿದೆ.

Leave a Reply

error: Content is protected !!