LOCAL NEWS : ಬೇವೂರು ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಎಸ್ ಪಿ ನಾಯ್ಕ ಅಧಿಕಾರ ಸ್ವೀಕಾರ!
ಕೊಪ್ಪಳ : ಜಿಲ್ಲೆಯ ಬೇವೂರು ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಎಸ್.ಪಿ.ನಾಯ್ಕ ಅಧಿಕಾರ ಸ್ವೀಕಾರ ಮಾಡಿರುತ್ತಾರೆ.
ಬೇವೂರ ಪೊಲೀಸ್ ಠಾಣೆಯಲ್ಲಿ ಪಿ ಎಸ್ ಐ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಶಾಂತ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಹೊಸಪೇಟೆ ಗ್ರಾಮೀಣ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಸ್.ಪಿ.ನಾಯ್ಕ ಅವರನ್ನು ಬೇವೂರು ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.
ನಂತರ ಅವರು ಮಾತನಾಡುತ್ತಾ ವಿವಿಧ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಸದ್ಯ ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು. ಹಾಗೂ ಸಾರ್ವಜನಿಕರಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡಿ ಅಥವಾ ಕರೆ ಮಾಡುವ ಮೂಲಕ ತಿಳಿಸಬೇಕು. 24 ಗಂಟೆಯಲ್ಲೇ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಠಾಣಾ ವ್ಯಾಪ್ತಿಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಜನರ ಸೇವೆ ಸಲ್ಲಿಸಲು ಸಿದ್ಧವಿದ್ದು, ಅಪರಾಧ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು ಪೊಲೀಸರನ್ನು ಜನತೆ ತಮ್ಮ ಸ್ನೇಹಿತರಂತೆ ಕಾಣಬೇಕು ಎಂದು ಹೇಳಿದರು.
ಈ ವೇಳೆ ಕುದುರಿಮೂತಿ ಗ್ರಾಮದ ಪ್ರಮುಖರಾದ ದುರ್ಗಪ್ಪ ಧೂಪಂ ಹಾಗೂ ಧರ್ಮಣ್ಣ ಕಳೆ ನೂತನ ಪಿಎಸ್ಐ ಅವರನ್ನು ಸನ್ಮಾನಿಸಿ ಸ್ವಾಗತಿಸುತ್ತಾ ಬೇವೂರು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಿಷ್ಪಕ್ಷಪಾತವಾಗಿ ಜನರ ಹಿತ ಕಾಯುತ್ತ ಕಾನೂನು ವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿಕೊಂಡರು. ಈ ವೇಳೆಯಲ್ಲಿ ಕುದುರಿಮೂತಿ ಗ್ರಾಮದ ಪ್ರಮುಖರು ಹಾಗೂ ಯುವಕರು ಪಾಲ್ಗೊಂಡಿದ್ದರು.