You are currently viewing BREAKING : ಅಡಕೆ ಕ್ಯಾನ್ಸರ್ ಕಾರಕ ಎಂದ ವಿಶ್ವ ಆರೋಗ್ಯ ಸಂಸ್ಥೆ-WHO..!!

BREAKING : ಅಡಕೆ ಕ್ಯಾನ್ಸರ್ ಕಾರಕ ಎಂದ ವಿಶ್ವ ಆರೋಗ್ಯ ಸಂಸ್ಥೆ-WHO..!!

ಪ್ರಜಾ ವೀಕ್ಷಣೆ ಸುದ್ದಿ :

BREAKING : ಅಡಕೆ ಕ್ಯಾನ್ಸರ್ ಕಾರಕ ಎಂದ ವಿಶ್ವ ಆರೋಗ್ಯ ಸಂಸ್ಥೆ-WHO..!!


ಬೆಂಗಳೂರು : ಅಡಕೆ ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ (World Health Organization -WHO) ಕರೆ ನೀಡಿದೆ.

ಕಳೆದ ಕೆಲ ದಿನಗಳ ಹಿಂದೆ ಶ್ರೀಲಂಕಾದಲ್ಲಿ ನಡೆದ ಆಗ್ನೆಯ ಏಷ್ಯಾ ಒಕ್ಕೂಟದೊಂದಿಗಿನ ವಿಶ್ವ ಆರೋಗ್ಯ ಸಂಸ್ಥೆಯ ಸಮಾವೇಶದಲ್ಲಿ ಅಡಕೆ ಬಗ್ಗೆ ಕೆಲವು ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ ಆಯೋಜಿಸಲಾದ ಸಮಾವೇಶ ಅ.16ಕ್ಕೆ ಸಮಾಪನಗೊಂಡಿದ್ದು, ಭಾರತ, ಬಾಂಗ್ಲಾ, ಭೂತಾನ್, ಉತ್ತರ ಕೊರಿಯಾ, ಮಾಲೀಲ್ಸ್, ಮ್ಯಾನ್ಮಾರ್, ನೇಪಾಳ, ಶ್ರೀಲಂಕಾ, ಥಾಯ್ಲೆಂಡ್, ಟೀಮೋರ್ ಲೆಸ್ಟೆ ರಾಷ್ಟ್ರಗಳು ಭಾಗವಹಿಸಿದ್ದವು. ಕ್ಯಾನ್ಸರ್‌ಕಾರಕ ವಸ್ತುಗಳ ವಿಚಾರದಲ್ಲಿ ಚರ್ಚೆ ನಡೆಸಲಾಗಿದೆ.

ಒಕ್ಕೂಟದ ಎಲ್ಲಾ ದೇಶಗಳಲ್ಲಿ ಒಟ್ಟಾಗಿ 28 ಕೋಟಿ ವಯಸ್ಕರು, 1.1 ಕೋಟಿ ಅಪ್ರಾಪ್ತರು ಹೊಗೆರಹಿತ ತಂಬಾಕು, ನಿಕೋಟಿನ್ ಮತ್ತಿತರ ವ್ಯಸನಿಗಳಿದ್ದಾರೆ, ಇದು ಕ್ಯಾನ್ಸರ್ ಮತ್ತು ಕಾರಣವಾಗಿದ್ದು ಇವುಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಈ ಉತ್ಪನ್ನಗಳ ಸಾಲಿನಲ್ಲಿ ಅಡಕೆಯನ್ನು ಕೂಡ ಸೇರಿಸಲಾಗಿದೆ. ಹೊಗೆರಹಿತ ತಂಬಾಕು, ನಿಕೋಟಿನ್, ಅಡಿಕೆ ಉತ್ಪಾದನೆ ಹಾಗೂ ಮಾರಾಟ ಇತ್ಯಾದಿಗಳ ಮೇಲೆ ನಿಯಂತ್ರಣಕ್ಕೆ ಚೌಕಟ್ಟು, ರಾಷ್ಟ್ರೀಯ ಶಾಸನ ತರಬೇಕು. ಉತ್ಪಾದನೆ, ಮಾರಾಟ, ಜಾಹೀರಾತು, ಪ್ರಚಾರ, ಪ್ರಾಯೋಜಕತ್ವ ನಿಷೇಧಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಲಾಗಿದೆ. ಅಡಿಕೆ ಸಹಿತ ಎಲ್ಲಾ ಉತ್ಪನ್ನಗಳನ್ನು ನಿಷೇಧಿಸಬೇಕೆಂದು ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ.

Prajavikshane

Chandru R Bhanapaur

Leave a Reply

error: Content is protected !!