You are currently viewing BIG NEWS : ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಗ್ರೀನ್‌ ಸಿಗ್ನಲ್..!

BIG NEWS : ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಗ್ರೀನ್‌ ಸಿಗ್ನಲ್..!

ಪ್ರಜಾ ವೀಕ್ಷಣೆ ಸುದ್ದಿ :

BIG NEWS : ರಾಜ್ಯಾದ್ಯಂತ 13 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಗ್ರೀನ್‌ ಸಿಗ್ನಲ್..!

ಬೆಂಗಳೂರು : ರಾಜ್ಯಾದ್ಯಂತ 13ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಗ್ರೀನ್‌ ಸಿಗ್ನಲ್ ಕೊಟ್ಟಿದ್ದು, ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23ರಿಂದ ನವೆಂಬ‌ರ್9 ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದರು.

ಮುಂಬರುವ ಡಿಸೆಂಬರ್ 7 ರಂದು ಟಿಇಟಿ ಪರೀಕ್ಷೆ ನಡೆಸಿ, ಡಿಸೆಂಬರ್31ರಂದು ಫಲಿತಾಂಶ ಪ್ರಕಟಿಸಲು ನಿರ್ಧರಿಸಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 4,780 ಶಿಕ್ಷಕರನ್ನು ನೇಮಕಾತಿ ಮಾಡಿದ್ದರು. ನಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಪ್ರಥಮ ವರ್ಷದಲ್ಲಿ 13ಸಾವಿರ ಶಿಕ್ಷಕರನ್ನು ನೇಮಕ ಮಾಡಿದ್ದೆ. ಇದೀಗ ಮತ್ತೆ 13ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದೇನೆ ಎಂದು ಹೇಳಿದರು.

Prajavikshane

Chandru R Bhanapaur

Leave a Reply

error: Content is protected !!