LOCAL NEWS : ಕುಕನೂರು ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಎಸ್.ಪಿ ನಾಯ್ಕ ಇಂದು ಅಧಿಕಾರ ಸ್ವೀಕಾರ!
ಕುಕನೂರು : ಕೊಪ್ಪಳ ಜಿಲ್ಲೆಯ ಕುಕನೂರು ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಆಗಿ ಎಸ್.ಪಿ.ನಾಯ್ಕ ಅವರು ಇಂದು ಹೆಚ್ಚುವರಿ ಪ್ರಬಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.
ಕುಕನೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ (ಪಿಎಸ್ಐ) ಸ್ಥಾನ ಕಾಲಿ ಇದ್ದ ಹಿನ್ನೆಲೆಯಲ್ಲಿ ಬೇವೂರು ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಸ್.ಪಿ.ನಾಯ್ಕ್ ಅವರನ್ನು ಕುಕನೂರು ಪೊಲೀಸ್ ಠಾಣೆಗೆ ಪ್ರಬಾರಿ ವಿಶೇಷ ಪಿಎಸ್ಐ ಆಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಆದೇಶದ ಮೇರೆಗೆ ಕುಕನೂರು ಪೊಲೀಸ್ ಠಾಣೆ ಪ್ರಭಾರ ಪಿಎಸ್ಐ ಆಗಿ ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.
‘ಕಲ್ಯಾಣ ಕರ್ನಾಟದಲ್ಲಿ ವಿವಿಧ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು, ಸದ್ಯ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯಾವುದೇ ಸಮಯದಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ ಕಾರ್ಯನಿರ್ವಹಿಸುತ್ತೇನೆ. ಜೊತೆಗೆ ಸಾರ್ವಜನಿಕರಲ್ಲಿ ಯಾವುದೇ ಸಮಸ್ಯೆ ಇದ್ದರೂ ಸಾರ್ವಜನಿಕರು ಠಾಣೆಗೆ ಭೇಟಿ ನೀಡಿ ಮಾಹಿತಿ ನೀಡಿ ಅಥವಾ ಕರೆ ಮಾಡುವ ಮೂಲಕ ತಿಳಿಸಬೇಕು ಎಂದರು.
’24 ಗಂಟೆಯಲ್ಲೇ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸಿ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ಠಾಣಾ ವ್ಯಾಪ್ತಿಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಜನರ ಸೇವೆ ಸಲ್ಲಿಸಲು ಸಿದ್ಧನಿದ್ದು, ಅಪರಾಧ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಪೊಲೀಸರನ್ನು ಜನಸಾಮಾನ್ಯರು ಸ್ನೇಹ ಭಾವನೆಯಿಂದ ಕಾಣಬೇಕು’ ಎಂದು ಪ್ರಜಾ ವೀಕ್ಷಣೆ ಮಾಧ್ಯಮಕ್ಕೆ ತಿಳಿಸಿದರು.