ಪ್ರಜಾ ವೀಕ್ಷಣೆ ಡಿಜಿಟಲ್‌  ಡೆಸ್ಕ್‌:

BREAKING : ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ನಿಧನ..!

ಬೆಂಗಳೂರು : ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ, ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ 12 ಗಂಟೆಗೆ ನಿಧನ ಹೊಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ 1911ರ ಜೂನ್ 30ರಂದು ಜನಿಸಿದ್ದ ಸಾಲುಮರದ ತಿಮ್ಮಕ್ಕ, ಹುಲಿಕಲ್​​ ಗ್ರಾಮದ ಚಿಕ್ಕಯ್ಯರನ್ನು ವಿವಾಹವಾಗಿದ್ದರು. ಆದರೆ ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ಹೀಗಾಗಿ ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ್ದರು. ಸಾಲು ಮರದ ತಿಮ್ಮಕ್ಕೆ ಎಂದೇ ಪ್ರಸಿದ್ಧರಾಗಿದ್ದ ಇವರಿಗೆ 2019ರಲ್ಲಿ ಪದ್ಮಶ್ರೀ ಲಭಿಸಿತ್ತು.