LOCAL NEWS : ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ನಿಧನ..!
ಯಲಬುರ್ಗಾ : ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ ಅವರು ಇಂದು ಬೆಳಗ್ಗೆ 11:42 ಕ್ಕೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಹುದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಇವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ತುಮಕೂರಿನ ಸಿದ್ಧಗಂಗಾ ಮೆಡಿಕಲ್ ಕಾಲೇಜ್ ನಲ್ಲಿ ಇವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು.
ಇಂದು ಅವರ ಪಾರ್ಥೀವ ಶರೀರವನ್ನು ಸಂಜೆ 7:30ಗೆ ಕುಕನೂರು ಪಟ್ಟಣದ ಶಿರೂರು ವೀರಭದ್ರಪ್ಪ ಸರ್ಕಲ್ ನಲ್ಲಿ ಕೆಲಕಾಲ ಪಾರ್ಥಿವ ಇರಿಸಿ, ಸಾರ್ವಜನಿಕ ವೀಕ್ಷಣೆಗೆ ಅನುಕೂಲ ಮಾಡಲಾಯಿತು.
ಈ ವೇಳೆ ನೂರಾರು ಜನ ಅವರ ಅಭಿಮಾನಿಗಳು ಹಾಗೂ ಸಾರ್ವಜನಿಕರು ಜಮಾಯಿಸಿದ್ದರು. ಅವರ ಅಂತ್ಯಕ್ರಿಯೆಯನ್ನು ಅವರ ಸ್ವಗ್ರಾಮವಾದ ಹುಣಸಿಹಾಳ ಗ್ರಾಮದಲ್ಲಿ ನಾಳೆ (ಗುರುವಾರದಂದು) ಸಂಜೆ 5 ಗಂಟೆಗೆ ನೆರೆವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.