BREAKING : ವಿದ್ಯಾರ್ಥಿನಿ ಹೆರಿಗೆ ಪ್ರಕರಣ : ವಸತಿ ನಿಲಯದ ಮೇಲ್ವಿಚಾರಕಿ ಸೇರಿದಂತೆ 6 ಮಂದಿ ವಿರುದ್ಧ ಎಫ್ಐಆರ್..! : ಕಂಪ್ಲೀಟ್ ಮಾಹಿತಿ..!

ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ :
ಕುಕನೂರು : ತಾಲೂಕಿನ ವಸತಿ ನಿಲಯವೊಂದರಲ್ಲಿ SSLC ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಘಟನೆ ಕುರಿತು ವಸತಿ ನಿಲಯದ ಮೇಲ್ವಿಚಾರಕಿ ಸೇರಿದಂತ 6 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲ್ಲೂಕಿನ ಡಿ.ದೇವರಾಜ ಅರಸ್ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯು ಶೌಚಾಲಯಕ್ಕೆ ತೆರಳಿದಾಗ ಅಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಳು ಎನ್ನಲಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಇಡೀ ಪ್ರಕರಣ ಬೆಳಕಿಗೆ ಬಂದಿತ್ತು. ಹಾಗಾಗಿ ಯುವಕ ಹನುಮನಗೌಡ ಬತ್ತಿ ಎಂಬಾತನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿ, ನಿನ್ನೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಈ ಪ್ರಕರಣ ಮುಚ್ಚಿಟ್ಟ ಆರೋಪದ ಹಿನ್ನಲೆ ಮೇಲ್ವಿಚಾರಕಿ ಸೇರಿ ಮೂವರು ಅಮಾನತು..!
ತಾಲೂಕಿನ ವಸತಿ ನಿಲಯದಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವಂತ ವಿಷಯವನ್ನು ಮುಚ್ಚಿಟ್ಟ ಹಿನ್ನಲೆಯಲ್ಲಿ ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ ಹಿರೇಮಠ, ಅಡುಗೆ ಕೆಲಸಗಾರರಾದ ಪಾರ್ವತಿ ಕುದಿರಿಮೋತಿ ಹಾಗೂ ಪ್ರಿಯಾಂಕಾ ಸಿಂಧೋಗಿ ಅವರನ್ನು ಅಮಾನತುಗೊಳಿಸಲಾಗಿದೆ.
ಇದಲ್ಲದೇ ಆರೋಪಿ ಹನುಮನಗೌಡ, ವಸತಿ ನಿಲಯದ ಮೇಲ್ವಿಚಾರಕಿ ಶಶಿಕಲಾ, ಶಿಕ್ಷಕರಾದ ಪ್ರಭಾಕರ ಭಜಂತ್ರಿ, ಯಂಕಪ್ಪ ಪೂಜಾರ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಕುಕನೂರು ತಂಡದ ವೈದ್ಯಾಧಿಕಾರಿ ಭರತೇಶ ಹಿರೇಮಠ ಹಾಗೂ ಸಬೀಯಾ ಮೇಲೂ ಎಫ್ಐಆರ್ ದಾಖಲಾಗಿದೆ ಎಂದು ತಿಳಿದು ಬಂದಿದೆ.
