BREAKING : ಗುಜರಿ ಲಾರಿ–ಮಿನಿ ಬಸ್ ಭೀಕರ ಡಿಕ್ಕಿ: ಪ್ರವಾಸಿಗರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ..! : ಹೈವೇ ಪೆಟ್ರೋಲ್ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ?

ಪ್ರಜಾ ವೀಕ್ಷಣೆ ಡಿಜಿಟಲ್ ಡೆಸ್ಕ್ :
ಹೈವೇ ಪೆಟ್ರೋಲ್ ಪೊಲೀಸರ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ?
ಕೋಪಳ : ಇಂದು ಕೊಪ್ಪಳ ತಾಲೂಕಿನ ಹಲಗೇರಿ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಗುಜರಿ ಲಾರಿಗೆ ನಿಯಂತ್ರಣ ತಪ್ಪಿ ಟಿಟಿ ಮಿನಿ ಬಸ್‌ಗೆ ಡಿಕ್ಕಿ ಹೊಡೆದ ಭೀಕರ ಘಟನೆ ಸಂಭವಿಸಿದೆ. ಬಸ್‌ನಲ್ಲಿದ್ದ ಅನೇಕ ಪ್ರವಾಸಿಗರಿಗೆ ಗಾಯಗಳಾಗಿದ್ದು, ಚಾಲಕ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ.
ಇಂದು 10 ಗಂಟೆ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ, ಶಾಂಭವಿ ಹೋಟೆಲ್–ಎಚ್‌ಪಿ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಗುಜರಿ ಲಾರಿಗೆ ಗದಗನಿಂದ ಕೊಪ್ಪಳದ ಕಡೆ ಬರುತ್ತಿರುವ ಟಿಟಿ ಮಿನಿ ಬಸ್‌ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದಾನೆ. ಈ ಮಿನಿ ಬಸ್‌ನಲ್ಲಿದ್ದ ಪ್ರಯಾಣಿಕರು ಮತ್ತು ಚಾಲಕನಿಗೆ ಗಂಭೀರ ಗಾಯಳಾಗಿವೆ ಎಂದು ತಿಳಿದು ಬಂದಿದೆ.
ಈ ಘಟನೆ ಸಂದರ್ಭದಲ್ಲಿ ಹೈವೇ ಪೆಟ್ರೋಲ್ ಸಂಚಾರಿ ಪೊಲೀಸರು ರಸ್ತೆಬದಿಯಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದರು ಎನ್ನಲಾಗಿದೆ. ಇದರ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಅಪಘಾತಕ್ಕೆ ನೇರ ಕಾರಣವಾಯಿತು ಎಂದು ಅಲ್ಲಿದ್ದ ಪ್ರತ್ಯಕ್ಷದರ್ಶಿ ಹಾಗೂ ಸ್ಥಳೀಯರು ಆರೋಪಿಸಿದ್ದಾರೆ.
