BIG NEWS : ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಹೈಲೆಟ್ಸ್‌!

You are currently viewing BIG NEWS : ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಹೈಲೆಟ್ಸ್‌!

BIG NEWS : ಇಂದು ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಹೈಲೆಟ್ಸ್‌!

ಪ್ರಜಾ ವೀಕ್ಷಣೆ ಡಿಜಿಟಲ್‌ ಡೆಸ್ಕ್‌ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳನ್ನು ತಗೆದುಕೊಳ್ಳಲಾಗಿದ್ದು,

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಹೈಲೆಟ್ಸ್‌..!

1) ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಚೆಕ್ ಡ್ಯಾಂ, ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ರೂ.200 ಕೋಟಿಗಳ ಅಂದಾಜು ಮೊತ್ತದಲ್ಲಿ ಜಾರಿಗೆ ಆಡಳಿತಾತ್ಮಕ ಅನುಮೋದನೆ.

2) ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ ರೂ.200 ಕೋಟಿ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

3) ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಘನತ್ಯಾಜ್ಯ ಸಮರ್ಪಕ DEA (OPERATION AND MAINTENANCE OF LANDFILL SITES) ಪ್ಯಾಕೇಜಿನ ಕಾಮಗಾರಿಗಳನ್ನು ರೂ.100 ಕೋಟಿ ಅಂದಾಜು ಮೊತ್ತದಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಮೂಲಕ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

4) ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷ ಅಭಿಯಾನ ಯೋಜನೆಯಡಿ ಕಟ್ಟಡ ನಿರ್ಮಾಣ, ಉಪಕರಣ ಖರೀದಿ ಸೇರಿದಂತೆ ರೂ.20 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಅನುಷ್ಠಾನಕ್ಕೆ ನಿರ್ಧಾರ.

5) ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಹೊರವಲಯದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನ ಸ್ಯಾಟಲೈಟ್ ಬಸ್ ನಿಲ್ದಾಣದ ಕಾಮಗಾರಿಯನ್ನು ರೂ.17.50 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ.

6) ಕಬಿನಿ ಎಡದಂಡೆ ಕಾಲುವೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ನಿರ್ಧಾರ.

7) ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಹಾಗೂ ಬೆಳಗಾವಿ ಜಿಲ್ಲೆಯ ರಾಮದುರ್ಗ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಗೇರಿಸಲು ನಿರ್ಧಾರ.

8) ಬೀದರ್ ಜಿಲ್ಲೆಯ ಕಮಠಾಣಾ, ಮನ್ನಾಏಖಳ್ಳಿ, ಹುಲಸೂರು ಗ್ರಾಮ ಪಂಚಾಯತಿ, ಬೆಳಗಾವಿ ಜಿಲ್ಲೆಯ ಅಂಕಲಿ, ಸುರೇಬಾನಾ ಮತ್ತು ಮನಿಹಾಳಾ, ಕಟಕೋಳಾ ಗ್ರಾಮ ಪಂಚಾಯತಿ,  ಮೈಸೂರು ಜಿಲ್ಲೆಯ ಸಾಲಿಗ್ರಾಮ ಗ್ರಾಮ ಪಂಚಾಯತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತ್ಯಾಮಗೊಂಡ್ಲು ಗ್ರಾಮ ಪಂಚಾಯತಿ, ಯಾದಗಿರಿ ಜಿಲ್ಲೆಯ ಸಗರ ಮತ್ತು ವಡಗೇರ ಗ್ರಾಮ ಪಂಚಾಯತಿ, ಉತ್ತರ ಕನ್ನಡ ಜಿಲ್ಲೆಯ ಮಾವಳ್ಳಿ ಗ್ರಾಮ ಪಂಚಾಯತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೆ ಉನ್ನತಿಕರಿಸಿದ್ದಾರೆ.

9) ಔಷಧಗಳು ಮತ್ತು ಸೌಂದರ್ಯ ವರ್ಧಕಗಳು (ಕರ್ನಾಟಕ ತಿದ್ದುಪಡಿ), 2025’ಕ್ಕೆ ಅನುಮೋದನೆ.

10) ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ (ತಿದ್ದುಪಡಿ) ವಿದೇಯಕ, 2025ಕ್ಕೆ ಅನುಮೋದನೆ.

11) ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ 2025 ಅನ್ನು ಜಾರಿಗೆ ತರಲು ನಿರ್ಧಾರ.

12) ಕರ್ನಾಟಕ ಕಿರು ಬಂದರುಗಳಲ್ಲಿ ಕಬ್ಬಿಣದ ಅದಿರು ನಿರ್ವಹಣಾ ನೀತಿ, 2025 ಅನ್ನು ಜಾರಿಗೆ ತರಲು ಅನುಮೋದನೆ.

13) ಕರ್ನಾಟಕ ನ್ಯಾಯಾಂಗ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2025ಕ್ಕೆ ಅನುಮೋದನೆ.

14) ಚಂದ್ರಗುತ್ತಿ ಶ್ರೀ ರೇಣುಕಾಂಬ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2025 ವನ್ನು ವಿಧಾನ ಮಂಡಲದ ಉಭಯ ಸದನಗಳ ಮುಂದೆ ಮಂಡಿಸಲು ನಿರ್ಧಾರ.

Leave a Reply

error: Content is protected !!