You are currently viewing BIG NEWS : ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ : 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ! 

BIG NEWS : ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ : 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ! 

BIG NEWS : ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ : 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧಾರ! 

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ : 

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಬಿಜೆಪಿ 20,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ ಎಂದು ಅಧಿಕೃತ ಮಾಹಿತಿ ಇದೆ.

ಮೊದಲ ದಿನವಾದ ಇಂದು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆಯಲಿದ್ದು, ಆದರೆ, ಮೊದಲ ದಿನವೇ ಉತ್ತರ ಕರ್ನಾಟಕ ಬಗ್ಗೆ ಚರ್ಚೆಗೆ ನಿಲುವಳಿ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ.

ಅಧಿವೇಶನದಲ್ಲಿ ಭಾರೀ ಗದ್ದಲ ಗಲಾಟೆ ನಡೆಯುವ ಸಾಧ್ಯತೆ ದಟ್ಟವಾಗಿದೆ. ಅನ್ನದಾತರ ಸಮಸ್ಯೆಗಳನ್ನು ಇಟ್ಟುಕೊಂಡೇ ಮೊದಲ ಹಂತದ ಹೋರಾಟಕ್ಕಿಳಿಯಲು ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸರ್ವ ಸನ್ನದ್ಧವಾಗಿದೆ.

*ರಾಜ್ಯ ಸರ್ಕಾರ VS ಕೇಂದ್ರ ಸರ್ಕಾರ*

ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರ ಸರ್ಕಾರದ ವೈಫಲ್ಯ ಬಗ್ಗೆ ಪ್ರತ್ಯಾರೋಪ, ಕಬ್ಬು ಬೆಳೆ ವಿಚಾರದಲ್ಲೂ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.

ಅದು ಅಲ್ಲದೆ, ಕಬ್ಬು, ಮೆಕ್ಕೆಜೋಳ ಬೆಳೆಗಾರರ ಬೆನ್ನಿಗೆ ಸರ್ಕಾರ ನಿಂತಿದೆ ಎಂದು ಸಮರ್ಥನೆ ಮಾಡಿಕೊಳ್ಳಲು ಯೋಜಿಸಿದೆ. 1 ಲಕ್ಷ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿ ಜನರ ಕಲ್ಯಾಣ ಕಾರ್ಯಗಳನ್ನು ಹಮ್ಮಿಕೊಂಡಿರುವ ಬಗ್ಗೆ ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ಮಾಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

Prajavikshane

Chandru R Bhanapaur

Leave a Reply

error: Content is protected !!