You are currently viewing BIG NEWS : ದ್ವೇಷ ಭಾಷಣ ಮಾಡಿದರೇ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ : ಮಹತ್ವದ ವಿಧೇಯಕ ಮಂಡನೆ!!

BIG NEWS : ದ್ವೇಷ ಭಾಷಣ ಮಾಡಿದರೇ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ : ಮಹತ್ವದ ವಿಧೇಯಕ ಮಂಡನೆ!!

BIG NEWS : ದ್ವೇಷ ಭಾಷಣ ಮಾಡಿದರೇ ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ. ದಂಡ : ಮಹತ್ವದ ವಿಧೇಯಕ ಮಂಡನೆ!!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ : 

ಬೆಳಗಾವಿ : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಕಡಿವಾಣ ಹಾಕುವುದಕ್ಕಾಗಿ ಮುಂದಾಗಿರುವ ರಾಜ್ಯ ಸರ್ಕಾರ ನಿನ್ನೆಯ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಿದೆ.

ವಿಧಾನಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಅವರು ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಮಂಡಿಸಿದರು.

ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು, ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂಜು ಸುವ್ಯವಸ್ಥೆ ಹದಗೆಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕ ತಂದಿದೆ ಎನ್ನಲಾಗಿದೆ.

ದ್ವೇಷ ಭಾಷಣದ ಮೂಲಕ ಸಮಾಜದ ಸಾಮರಸ್ಯ ಕದಡುವ ಕೃತ್ಯ ತಡೆಯುವ ಉದ್ದೇಶ ಹೊಂದಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ (ಪ್ರತಿಬಂಧಕ) ವಿಧೇಯಕವನ್ನು ನಿನ್ನೆ ಸರ್ಕಾರ ಮಂಡಿಸಿತು. ದ್ವೇಷ ಹರಡುವವರಿಗೆ ಗರಿಷ್ಠ 7 ವರ್ಷ ಜೈಲು ಶಿಕ್ಷೆ ವಿಧಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು ಸೇರಿ ಹಲವು ಕಠಿಣ ಅಂಶಗಳನ್ನು ಈ ವಿಧೇಯಕ ಹೊಂದಿದೆ ಎಂದು ಮಾಹಿತಿ ಇದೆ.

ದ್ವೇಷ ಭಾಷಣ ಮತ್ತು ದ್ವೇಷ ಹರಡುವ ಅಪರಾಧ ಎಸಗುವವರಿಗೆ ಒಂದು ವರ್ಷದಿಂದ ಗರಿಷ್ಠ 7 ವರ್ಷಗಳವರೆಗೆ ಜೈಲು ಶಿಕ್ಷೆ, 50 ಸಾವಿರ ರು. ದಂಡ ವಿಧಿಸುವ ಅವಕಾಶವಿದೆ.

ಜೊತೆಗೆ ಪುನರಾವರ್ತಿತ ಅಪರಾಧಗಳಿಗೆ 2 ವರ್ಷಗಳಿಂದ 10 ವರ್ಷ ಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷ ರು.ವರೆಗೆ ದಂಡ ವಿಧಿಸಬಹುದು. ಯಾವುದೇ ಸಂಘ-ಸಂಸ್ಥೆ ಅಪರಾಧ ಎಸಗಿದರೆ ಆ ಸಂಘ-ಸಂಸ್ಥೆಯ ಜವಾಬ್ದಾರನಾಗಿರುವ ಪ್ರತಿಯೊಬ್ಬರೂ ಅದರಲ್ಲಿ ಭಾಗೀದಾರರಾಗಲಿದ್ದಾರೆ. ಈ ಅಪರಾಧವನ್ನು ಜಾಮೀನು ರಹಿತ ಎಂದು ಪರಿಗಣಿಸಲಾಗುತ್ತಿದ್ದು, ಪ್ರಥಮ ದರ್ಜೆ ಮಾಜಿಸ್ಟ್ರೇಟ್ ಪ್ರಕರಣದ ವಿಚಾರಣೆ ನಡೆಸಬೇಕು ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.

Prajavikshane

Chandru R Bhanapaur

Leave a Reply

error: Content is protected !!