You are currently viewing FLASH NEWS : ವಿದ್ಯಾರ್ಥಿನಿಯರು ಹಾಗೂ ಮಹಿಳಾ ನೌಕರರಿಗೆ “ಋತುಚಕ್ರ ರಜೆ” : ಸರ್ಕಾರದಿಂದ ಮಹತ್ವದ ಆದೇಶ!

FLASH NEWS : ವಿದ್ಯಾರ್ಥಿನಿಯರು ಹಾಗೂ ಮಹಿಳಾ ನೌಕರರಿಗೆ “ಋತುಚಕ್ರ ರಜೆ” : ಸರ್ಕಾರದಿಂದ ಮಹತ್ವದ ಆದೇಶ!

FLASH NEWS : ವಿದ್ಯಾರ್ಥಿನಿಯರು ಹಾಗೂ ಮಹಿಳಾ ನೌಕರರಿಗೆ “ಋತುಚಕ್ರ ರಜೆ” : ಸರ್ಕಾರದಿಂದ ಮಹತ್ವದ ಆದೇಶ!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ : 

ಬೆಂಗಳೂರು : ರಾಜ್ಯ ಸರ್ಕಾರವು ಮಹಿಳಾ ನೌಕರರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆಗೆ ಮಹತ್ವದ ಆದೇಶ ಹೊರಡಿಸಿದ್ದು, ಇದೀಗ ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳಾ, ಲಿಂಗತ್ವ ಅಲ್ಪಸಂಖ್ಯಾತ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದರಂತೆ ವರ್ಷಕ್ಕೆ 12 ವೇತನ ಸಹಿತ “ಋತುಚಕ್ರ ರಜೆ” ನೀಡಲು ಮುಂದಾಗಿದೆ.

ಹೌದು, ಕರ್ನಾಟಕ ಮಹಿಳಾ ಯೋಗಕ್ಷೇಮ ಕಾಯ್ದೆ-2025 ಜಾರಿಗೆ ರಾಜ್ಯ ಸರ್ಕಾರ ಸಜ್ಜಾಗಿದ್ದು, ಇಂದು ನಡೆಯಲಿರುವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಕಾಯ್ದೆಯಡಿ ರಾಜ್ಯದಲ್ಲಿ ಕರ್ನಾಟಕ ಯೋಗಕ್ಷೇಮ ಪ್ರಾಧಿಕಾರ ರಚಿಸಲಾಗುವುದು. ಜೊತೆಗೆ ಮುಟ್ಟು ಅವಧಿಯಲ್ಲಿ ಮಹಿಳೆಗೆ ರಜೆ ನೀಡದಿರುವುದು, ಭೇದಭಾವ ಮಾಡುವುದು, ಅಸ್ಪೃಶ್ಯರಂತೆ ಕಂಡರೆ 5,000 ರು. ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ.

ರಾಜ್ಯದಲ್ಲಿ ಋತುಚಕ್ರ ರಜೆ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು, ಕಾರ್ಖಾ ನೆಗಳು ಹಾಗೂ ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳಲ್ಲಿನ ಮಹಿಳಾ ಉದ್ಯೋಗಿಗಳಿಗೆ ರಜೆ ಅನ್ವಯವಾಗಲಿದೆ. ಲಿಂಗತ್ವಅಲ್ಪಸಂಖ್ಯಾತ ವ್ಯಕ್ತಿಗಳಲ್ಲಿ ಟ್ರಾನ್ಸ್ ಮೆನ್ ಹಾಗೂ ಟ್ರಾನ್ಸ್ ವುಮೆನ್ ಇಬ್ಬರಿಗೂ ಈ ಸೌಲಭ್ಯ ಕಲ್ಪಿಸಲು ಉದ್ದೇಶಿಸಲಾಗಿದೆ. ಇನ್ನು ಮುಟ್ಟು ಅವಧಿ ಮುಗಿದ ಅಥವಾ 52 ವರ್ಷ ದಾಟಿದ ಮಹಿಳಾ ಉದ್ಯೋಗಿಗೆ ಮುಟ್ಟಿನ ರಜೆ ಅನ್ವಯವಾಗುವುದಿಲ್ಲ.

Prajavikshane

Chandru R Bhanapaur

Leave a Reply

error: Content is protected !!