ಮುದಗಲ್ಲ ವರದಿ..
ಸಬಲೀಕರಣದಿಂದ ಮಹಿಳೆಯರ ಸ್ವಾವಲಂಬಿ ಜೀವನ :- ಜೆ ಚಂದ್ರಶೇಖರ್..

ಮುದಗಲ್: ತಾಲೂಕು ಮಟ್ಟದ
ಮಹಿಳಾ ವಿಚಾರಗೋಷ್ಠಿಗೆ ಚಾಲನೆ ಟ್ಟಣದ ಐತಿಹಾಸಿಕ ಶ್ರೀ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದರು.
ಮಹಿಳೆಯರ ಸ್ವಾವಲಂಬಿ ಜೀವನ ನಿರ್ವಹಣೆಗೆ ಮಹಿಳಾ ಸಬಲೀಕರಣಗಳಂತಹ ಕಾರ್ಯಕ್ರಮಗಳು ಅವಶ್ಯವಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಸ್ವಾವಲಂಬಿ ಜೀವನಕ್ಕೆ ಮುಂದಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿದೇ೯ಶಕರಾದ ಜೆ ಚಂದ್ರಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ
ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಚಾಲನೆ ನೀಡಿದರು..
ಇಂದು ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ತಮ್ಮನ್ನು ತಾವು ಗುರುತಿಸಿಕೊಳ್ಳುವ ಮೂಲಕ ಪುರುಷರಿಗೆ ಸರಿಸಮರಾಗಿದ್ದಾರೆ. ಧರ್ಮಸ್ಥಳ ಸಂಘವು ಮಹಿಳೆಯರಲ್ಲಿ ಆರ್ಥಿಕ ಶಕ್ತಿ ತುಂಬುವ ಜತೆಗೆ ಅವರಲ್ಲಿ ಶಿಸ್ತು ಮೂಡಿಸುವ ಕೆಲಸ ಮಾಡುತ್ತಿದೆ. ಡಾ. ವೀರೆಂದ್ರ ಹೆಗ್ಡೆ ಅವರು ದೂರದೃಷ್ಟಿಯುಳ್ಳ ಯೋಜನೆ ಗಳನ್ನು ಜಾರಿಗೆ ತಂದು ಎಲ್ಲರ ಅಭ್ಯುದಯವನ್ನು ಬಯಸುತ್ತಿದ್ದಾರೆ. ಮಹಿಳೆಯರು ಯೋಜನೆಗಳ ಪ್ರಯೋಜನ ಪಡೆದುಕೊಂಡು ಆರ್ಥಿಕ ಸದೃಢರಾಗುವ ಮೂಲಕ ಸ್ವಸ್ಥ ಸಮಾಜ ನಿರ್ಮಿಸಬೇಕೆಂದರು.ಇದೇ ವೇಳೆ ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಎನ್ನುವ ವಿಷಯದ ಕುರಿತು ಶರಣ್ಯ ಹರೀಶ ಅಂಗಡಿ ಅವರು ಉಪನ್ಯಾಸ ನೀಡಿದರು.
ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ
ವೇದಿಕೆ ಸದಸ್ಯೆ ಶಶಿಕಲಾ ಬೋವಿ ಮಾತನಾಡಿದ್ದರು ಮಹಿಳೆಯರು ಅಡುಗೆ ಮನೆಗಷ್ಟೆ ಸೀಮಿತವಾಗದೆ ಎಲ್ಲಾ ಕ್ಷೇತ್ರಗಳಲ್ಲಿಯೂ ಗಣನೀಯ ಸೇವೆ ಸಲ್ಲಿಸುವ ಮೂಲಕ ಕುಟುಂಬವನ್ನು ತಾವೇ ನಿರ್ವಹಿಸಿಕೊಂಡು ಆದರ್ಶ ಮಹಿಳೆಯಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗುತ್ತಿದ್ದಾಳೆ. ಮಹಿಳೆಯರು ಮತ್ತಷ್ಟು ಸಬಲಳಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಅಧ್ಯಕ್ಷತೆಯನ್ನು ಜಿಲ್ಲಾ ಜನಜಾಗೃತಿ
ವೇದಿಕೆ ಸದಸ್ಯೆ ಶಶಿಕಲಾಬೋವಿ ವಹಿಸಿದ್ದರು. ವೇದಿಕೆಯ ಉಪಾಧ್ಯಕ್ಷೆ ತೋಟಮ್ಮ,ಸುರೇಶಗೌಡ, ಸೇರಿ
ಯೋಜನಾಧಿಕಾರಿಗಳು, ಜ್ಞಾನವಿಕಾಸ ಸಮನ್ವಯಾಧಿಕಾರಿ, ಸಂಯೋಜಕಿಯರು, ಸೇವಾ ಪ್ರತಿನಿಧಿಗಳು ಇದ್ದರು ಉಪಸ್ಥಿತರಿದ್ದರು..
ವರದಿ:- ಮಂಜುನಾಥ ಕುಂಬಾರ