You are currently viewing BREAKING : ಕಾಂಗ್ರೆಸನ ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ (94) ನಿಧನ! 

BREAKING : ಕಾಂಗ್ರೆಸನ ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ (94) ನಿಧನ! 

BREAKING : ಕಾಂಗ್ರೆಸನ ಹಿರಿಯ ರಾಜಕಾರಣಿ, ಶಾಸಕ ಶಾಮನೂರು ಶಿವಶಂಕರಪ್ಪ (94) ನಿಧನ! 

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ :

ಬೆಂಗಳೂರು : ಕಾಂಗ್ರೆಸನ ಹಿರಿಯ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ನಿಧನರಾಗಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು, ಇವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು7 ಗಂಟೆಯ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಶಾಮನೂರು ಅವರಿಗೆ 94 ವಯಸ್ಸಾಗಿದ್ದು, ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ, ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

Prajavikshane

Chandru R Bhanapaur

Leave a Reply

error: Content is protected !!