BREAKING : ಗದಗ, ಮಂಗಳೂರು ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಗೆ ಬೆದರಿಕೆ ಇ-ಮೇಲ್..!!
ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಹಾಸನ; ಗದಗ, ಮಂಗಳೂರು ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದೆ ಎಂದು ತಿಳಿದು ಬಂದಿದೆ.
ಹಾಸನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮಾಡಲಾಗಿದ್ದು, ಈ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ಮಾಹಿತಿ ಇದೆ.
ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯುವ ಸಮಯದಲ್ಲೇ ಬೆದರಿಕೆ ಇ-ಮೇಲ್ ಕಳುಹಿಸಲಾಗಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ, ಶ್ವಾನದಳದಿಂದ ಪರಿಶೀಲನೆ ನಡೆಸಲಾಗಿದ್ದು, ಶೋಧ ಕಾರ್ಯ ಮುಂದುವರೆಯುತ್ತಿದೆ.