You are currently viewing BIG NEWS : ಬರೋಬ್ಬರಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಿದ್ದ ಐನಾತಿ..!

BIG NEWS : ಬರೋಬ್ಬರಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಿದ್ದ ಐನಾತಿ..!

BIG NEWS : ಬರೋಬ್ಬರಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಿದ್ದ ಐನಾತಿ..!

ಪ್ರಜಾ ವೀಕ್ಷಣೆ ಡಿಜಿಟಲ್ ಸುದ್ದಿ : 

ಬೆಳಗಾವಿ : ಬೆಂಗಳೂರಿನ ಕೆಂಗೇರಿ ಬಿ.ಎಂ. ಕಾವಲ್ ನಲ್ಲಿ 532 ಎಕರೆ ಅರಣ್ಯ ಹಾಗೂ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ಕೋರ್ಟ್ ನಿಂದ ಆದೇಶ ಪಡೆದಿದ್ದ ಎಂ.ಬಿ.ನೇಮಣ್ಣಗೌಡ ಅಲಿಯಾಸ್ ಎಂ.ಬಿ.ಮನ್ಮಥನನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಹಲವು ದಿನಗಳ ಹಿಂದೆ ಎಂ.ಬಿ. ನೇಮಣ್ಣ ಗೌಡ ಅಲಿಯಾಸ್ ಎಂ.ಬಿ. ಮನ್ಮಥ ಎಂಬ ವ್ಯಕ್ತಿ ಈ ಹಿಂದೆಯೂ ಇದೇ ರೀತಿ ಸುಳ್ಳು ಮತ್ತು ನಕಲಿ ದಾಖಲೆ ನೀಡಿ 512 ಎಕರೆ 26 ಗುಂಟೆ ಅರಣ್ಯ, ಸರ್ಕಾರಿ ಭೂಮಿಯ ಮೇಲೆ ಹಕ್ಕು ಸಾಧಿಸಲು ಪ್ರಯತ್ನಿಸಿದ್ದರು ಎನ್ನಲಾಗಿದೆ.

ಈ ಬಗ್ಗೆ ಕಳೆದ ನವೆಂಬರ್ 28ರಂದು ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯವರು ಮೂಡಿಗೆರೆ ಆರಕ್ಷಕ ವೃತ್ತ ನಿರೀಕ್ಷಕರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ತಹಶೀಲ್ದಾರ್ ಅವರೂ ಈ ಬಗ್ಗೆ ದೂರು ನೀಡಿದ್ದರು ಎಂದು ವಿವರಿಸಿದರು.

ಈ ದೂರುಗಳ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿದ ಪೊಲೀಸರು ಈಗ ಮನ್ಮಥ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಅರಣ್ಯ ಮತ್ತು ಸರ್ಕಾರಿ ಭೂಮಿ ಕಬಳಿಕೆಯ ಈ ಸಂಚಿನಲ್ಲಿ ಯಾರು ಯಾರು ಶಾಮೀಲಾಗಿದ್ದಾರೆ ಎಂಬ ವಿಷಯ ಬಯಲಾಗಲಿದೆ ಎಂದು ಹೇಳಿದರು.

ಸಾವಿರಾರು ಕೋಟಿ ರೂ. ಬೆಲೆ ಬಾಳುವ ಸರ್ಕಾರಿ ಭೂಮಿ ಮತ್ತು ಅರಣ್ಯ ಭೂಮಿ ಕಬಳಿಸುವವರಿಗೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕೆಲವು ಅಧಿಕಾರಿಗಳು ಮತ್ತು ಸರ್ಕಾರಿ ವಕೀಲರು ಸಹಾಯ ಮಾಡುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಿಐಡಿ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಲು ಕೋರಿದ್ದೇವೆ ಎಂದರು.

Leave a Reply

error: Content is protected !!