LOCAL NEWS : ಬರೋಬ್ಬರಿ 272.00 ಕೋಟಿ ರೂ.ಗಳ ವೆಚ್ಚದಲ್ಲಿ ಯಲಬುರ್ಗಾ/ಕುಕನೂರು ತಾಲೂಕಿನ ಕೆರೆ ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ!
ಪ್ರಜಾ ವೀಕ್ಷಣೆ ಸುದ್ದಿ
ಯಲಬುರ್ಗಾ- ಕುಕನೂರು : ಕಳೆದ ಡಿಸೆಂಬರ್ 18 ರಂದು ಬೆಳಗಾವಿಯಲ್ಲಿ ನಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೊಪ್ಪಳ ಜಿಲ್ಲೆ ಯಲಬುರ್ಗಾ ಮತ್ತು ಕುಕನೂರು ತಾಲೂಕ ವ್ಯಾಪ್ತಿಯಲ್ಲಿನ 19 ಕೆರೆಗಳಿಗೆ ಕೃಷ್ಣಾ ನದಿಯಿಂದ ನೀರು ತುಂಬಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆಯನ್ನು ರಾಜ್ಯ ಸರಕಾರ ನೀಡಿದೆ.
ಬರೋಬ್ಬರಿ 272.00 ಕೋಟಿ ರೂ.ಗಳ ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ರಾಜ್ಯ ಸರಕಾರದ ನೀಡಿದೆ.
ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆಯುವದಕ್ಕೆ ಕಾರಣಿಕರ್ತರಾದ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರಿಗೆ ಹಾಗೂ ಯೋಜನೆಯನ್ನು ಅನುಮೋದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ರಾಜ್ಯದ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ರವರಿಗೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಸಮಸ್ತ ನಾಗರಿಕರ ಪರವಾಗಿ ತುಂಬು ಹೃದಯದ ಧನ್ಯವಾದಗಳು ಸಲ್ಲಿಸಿದ್ದಾರೆ.
ಯಲಬುರ್ಗಾ ಮತ್ತು ಕುಕನೂರು ತಾಲೂಕಿನ ಕೆರೆ ತುಂಬಿಸುವ ಗ್ರಾಮಗಳ ವಿವರ ಹೀಗಿದೆ.