You are currently viewing PV SPECIAL : ಕುಸಿಯುವ ಹಂತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ : ಆತಂಕದಲ್ಲಿ ಸಿಬ್ಬಂದಿ ಹಾಗೂ ಸಾರ್ವಜನಿಕರು!!

PV SPECIAL : ಕುಸಿಯುವ ಹಂತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ : ಆತಂಕದಲ್ಲಿ ಸಿಬ್ಬಂದಿ ಹಾಗೂ ಸಾರ್ವಜನಿಕರು!!

PV SPECIAL : ಕುಸಿಯುವ ಹಂತದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ : ಆತಂಕದಲ್ಲಿ ಸಿಬ್ಬಂದಿ ಹಾಗೂ ಸಾರ್ವಜನಿಕರು!!

ಪ್ರಜಾವೀಕ್ಷಣೆ ಸುದ್ದಿ : 

ಕೊಪ್ಪಳ : ನಗರದ ತಾಲೂಕು ಪಂಚಾಯತ್ ಆವರಣದಲ್ಲಿರುವ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯ ಕಟ್ಟಡವು ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿ ಸಾರ್ವಜನಿಕರು ಮತ್ತು ಕಚೇರಿಯ ಸಿಬ್ಬಂದಿಗಳು ಎದುರಿಸುವ ಸಂದರ್ಭ ನಿರ್ಮಾಣಗೊಂಡಿದೆ.

ಕಾರ್ಯಾಲಯದ ಮೇಲ್ಛಾವಣಿಯ ಸಿಮೆಂಟ್ ಪ್ಲ್ಯಾಸ್ಟರಿಂಗ್ ಕಿತ್ತು ಹೋಗಿದ್ದು, ಒಳಗಿನ ಕಬ್ಬಿಣದ ಸರಳುಗಳು ತುಕ್ಕು ಹಿಡಿದು ಹೊರಗೆ ಕಾಣಿಸುತ್ತಿವೆ. ಮಳೆಗಾಲದಲ್ಲಿ ಕಟ್ಟಡ ಸೋರುತ್ತಿದ್ದು, ಕಚೇರಿಯ ಕಡತಗಳು ಹಾಗೂ ಕಂಪ್ಯೂಟರ್‌ಗಳು ಹಾಳಾಗುವ ಆತಂಕ ಎದುರಾಗಿದೆ. ಅಷ್ಟೇ ಅಲ್ಲದೆ, ಕೆಲಸದ ಸಮಯದಲ್ಲಿ ಸಿಮೆಂಟ್ ಚಕ್ಕೆಗಳು ತಲೆಯ ಮೇಲೆ ಬೀಳುತ್ತಿರುವುದು ಸಿಬ್ಬಂದಿಗಳಲ್ಲಿ ಭಯದ ವಾತಾವರಣ ನಿರ್ಮಿಸಿದೆ .

ಸಾರ್ವಜನಿಕರಲ್ಲಿ ಆತಂಕ..!

ಹಿಂದುಳಿದ ವರ್ಗಗಳ ವಿವಿಧ ಸೌಲಭ್ಯಗಳಿಗಾಗಿ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಇಲ್ಲಿಗೆ ಭೇಟಿ ನೀಡುತ್ತಾರೆ. ಇಂತಹ ಅಪಾಯಕಾರಿ ಪರಿಸ್ಥಿತಿಯಲ್ಲಿ ಕೆಲಸ ಮಾಡುವುದು ಮತ್ತು ಓಡಾಡುವುದು ಪ್ರಾಣಾಪಾಯಕ್ಕೆ ಆಹ್ವಾನ ನೀಡಿದಂತಿದೆ.

ಸಾರ್ವಜನಿಕರ ಆಗ್ರಹ:

ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಶ್ರಮಿಸುವ ಇಲಾಖೆಯ ಕಚೇರಿಯೇ ಇಂದು ಅಭಿವೃದ್ಧಿ ಕಾಣದೆ ಪಾಳು ಬಿದ್ದಿದೆ. ಸಂಬಂಧಪಟ್ಟ ಅಧಿಕಾರಿಗಳು ಅಥವಾ ಜಿಲ್ಲಾಡಳಿತ ತಕ್ಷಣವೇ ಎಚ್ಚೆತ್ತುಕೊಂಡು ಕಟ್ಟಡದ ದುರಸ್ತಿಗೆ ಮುಂದಾಗಬೇಕು ಅಥವಾ ಕಚೇರಿಯನ್ನು ಸುರಕ್ಷಿತ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

 ಯಾವುದೇ ದೊಡ್ಡ ಅನಾಹುತ ಸಂಭವಿಸುವ ಮುನ್ನ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಎಚ್ಚೆತ್ತುಕೊಂಡು ಸಮಸ್ಯೆ ನಿವಾರಣೆಗೆ ಮುಂದಾಗುವವರೇ ಎಂಬುದನ್ನು ಕಾದು ನೋಡಬೇಕಿದೆ.

ಕಟ್ಟಡವು ಸಂಪೂರ್ಣ ಶಿಥಿಲಾವಸ್ತೆ ತಲುಪಿದ್ದು ದಿನಂಪ್ರತಿ ತಮ್ಮ ಕೆಲಸ ಕಾರ್ಯಗಳಿಗೆ ಕಾರ್ಯಾಲಯಕ್ಕೆ ವಿದ್ಯಾರ್ಥಿಗಳು ಪಾಲಕರು ಹಾಗೂ ಸಾರ್ವಜನಿಕರು ಭೇಟಿ ನೀಡುತ್ತಿದ್ದು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಕಾರ್ಯಾಲಯದ ಕಟ್ಟಡ ಪ್ರವೇಶಿಸುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಜಿಲ್ಲಾ ಕೇಂದ್ರದಲ್ಲಿ ಇಂತಹ ಪರಿಸ್ಥಿತಿಯ ಕಾರ್ಯಾಲಯ ಜನಪ್ರತಿನಿಧಿಗಳಿಗೆ ಕಾಣುತ್ತಿಲ್ಲವೇ…..?

 ಮಂಗಳೇಶ ರಾಥೋಡ್, ಸಾರ್ವಜನಿಕರು 

ತಾಲೂಕ ಹಿಂದುಳಿದ ವರ್ಗಗಳ ಕಾರ್ಯಾಲಯ ಕಾರ್ಯನಿರ್ವಹಿಸುತ್ತಿರುವ ಕಟ್ಟಡ ತುಂಬಾ ಹಳೆಯದಾಗಿದ್ದು ಈಗಾಗಲೇ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ನೂತನ ಸ್ವಂತ ಕಟ್ಟಡದ ಪ್ರಸ್ತಾವನೆಯನ್ನು ಸಲ್ಲಿಸಿದ್ದು ಅಗತ್ಯವಿರುವ ಒಂದು ಎಕರೆ ಜಾಗವನ್ನು ನಗರದ ಡಾಲರ್ಸ್ ಕಾಲೋನಿಯಲ್ಲಿ ಈಗಾಗಲೇ ಇಲಾಖೆಯ ಹೆಸರಿನಲ್ಲಿ ನೋಂದಾಯಿಸಲಾಗಿದ್ದು ಶೀಘ್ರದಲ್ಲಿ ನೂತನ ಕಾರ್ಯಾಲಯ ಕಟ್ಟಡ ನಿರ್ಮಾಣಗೊಳ್ಳುವ ನಿರೀಕ್ಷೆ ಇದೆ.

              ನಾಗರತ್ನ, ತಾಲೂಕಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಪ್ಪಳ

 

ಕಾರ್ಯಾಲಯದ ಒಳಗೆ ಪಾದರ್ಪಣೆ ಮಾಡಬೇಕಾದ ಸಂದರ್ಭದಲ್ಲಿ ದೇವರನ್ನು ನೆನೆದು ಒಳಹೋಗುವ ಪರಿಸ್ಥಿತಿ ಆವರಿಸಿದ್ದು, ಪ್ರಾಣವನ್ನು ಅಂಗೈಯಲ್ಲಿ ಹಿಡಿದುಕೊಂಡು ಕಾರ್ಯನಿರ್ವಹಿಸುವ ನೀತಿ ನಮ್ಮನ್ನು ಆವರಿಸಿಕೊಂಡಿದೆ.

ಹೆಸರು ಹೇಳದ,ಕಾರ್ಯಾಲಯದ ಸಿಬ್ಬಂದಿ

Leave a Reply

error: Content is protected !!