BIG BREAKING NEWS : ಭೀಕರ ರಸ್ತೆ ಅಪಘಾತ : ಬಸ್ ಸುಟ್ಟು ಭಸ್ಮ : 20 ಕ್ಕೂ ಹೆಚ್ಚು ಮಂದಿ ಸಾವು!!

You are currently viewing BIG BREAKING NEWS : ಭೀಕರ ರಸ್ತೆ ಅಪಘಾತ : ಬಸ್ ಸುಟ್ಟು ಭಸ್ಮ : 20 ಕ್ಕೂ ಹೆಚ್ಚು ಮಂದಿ ಸಾವು!!

BIG BREAKING NEWS : ಭೀಕರ ರಸ್ತೆ ಅಪಘಾತ : ಬಸ್ ಸುಟ್ಟು ಭಸ್ಮ : 20 ಕ್ಕೂ ಹೆಚ್ಚು ಮಂದಿ ಸಾವು!!

ಪ್ರಜಾ ವೀಕ್ಷಣೆ ಸುದ್ದಿ : 

ಚಿತ್ರದುರ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 20 ಕ್ಕೂ ಹೆಚ್ಚು ಮಂದಿ ಸುಟ್ಟು ಭಸ್ಮವಾಗಿದ್ದಾರೆ.

ರಾತ್ರಿ 12 ಗಂಟೆಗೆ ಬೆಂಗಳೂರಿನಿಂದ ಗೋಕರ್ಣದತ್ತ ತೆರಳುತ್ತಿದ್ದ ಈ ಬಸ್‌ ರಾತ್ರಿ 2:45 ರ ಸುಮಾರಿಗೆ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ನಲ್ಲಿದ್ದ 20 ಕ್ಕೂ ಹೆಚ್ಚು ಜನರು ಸಜೀವ ದಹನವಾಗಿದ್ದಾರೆ. ಹಲವರು ಗಾಯಗೊಂಡಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ವೇಗವಾಗಿ ಬರುತ್ತಿದ್ದ ಬಸ್ ಬೃಹತ್ ಕಂಟೈನರ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಗೆ ಬೆಂಕಿ ಹತ್ತಿಕೊಂಡಿದೆ. ಒಂದಷ್ಟು ಪ್ರಯಾಣಿಕರು ಬಸ್ನಿಂದ ಇಳಿದರೂ ಕೂಡಾ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ.

ಈ ಅಪಘಾತ ಎಸಗಿದ ಲಾರಿ ಮತ್ತು ಬಸ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಬಸ್ ಡಿಕ್ಕಿ ಹೊಡೆದಿದೆ. ನಿದ್ದೆಯ ಮಂಪರಿನಲ್ಲಿದ್ದ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.

Leave a Reply

error: Content is protected !!