You are currently viewing BREAKING : ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ! : ಬಿಗ್ ಟ್ವಿಸ್ಟ್..!!

BREAKING : ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ! : ಬಿಗ್ ಟ್ವಿಸ್ಟ್..!!

BREAKING : ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟ! : ಬಿಗ್ ಟ್ವಿಸ್ಟ್..!

ಪ್ರಜಾ ವೀಕ್ಷಣೆ ಸುದ್ದಿ :

ಮೈಸೂರು : ದೇಶದ ರಾಜಧಾನಿ ದೆಹಲಿಯಲ್ಲಿ ಕಾರು ಬಾಂಬ್ ಸ್ಪೋಟ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಕೂಡ ಹೈ ಅಲರ್ಟ್ ಘೋಷಿಸಲಾಗಿದ್ದು, ಇದರ ಬೆನ್ನೆಲ್ಲೆ ನಿನ್ನೆ ಮೈಸೂರು ಅರಮನೆ ಆವರಣದಲ್ಲಿ ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಕಾರಣ ಏನೆಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಇದು ಬಿಗ್ ಟ್ವಿಸ್ಟ್ ದೊರೆತಿದೆ.

ಈ ಘಟನೆ ಸಂಬಂಧ ಇದೀಗ ಮೈಸೂರು ಪೊಲೀಸರು ಎಫ್ಐಆರ್ ದಾಖಲಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದು, ಹೀಲಿಯಂ ಸಿಲಿಂಡರ್ ಸ್ಫೋಟಕ್ಕೆ ಹೀಲಿಯಂ ಗ್ಯಾಸ್ ತುಂಬುವ ವೇಳೆ ಒತ್ತಡ ಹೆಚ್ಚಾಗಿ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಹೌದು, ಮೈಸೂರು ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ತುಂಬಿದ್ದ ಸಿಲಿಂಡರ್ ಸ್ಪೋಟಗೊಂಡು ಬಲೂನ್ ವ್ಯಾಪಾರಿ ಸಲೀಂ ಮೃತಪಟ್ಟ ಘಟನೆಯ ಅಸಲಿ ಕಾರಣ ಈಗ ಬಹಿರಂಗವಾಗಿದೆ. ಸಲೀಂ ಸತತವಾಗಿ ಬಲೂನ್‌ಗಳಿಗೆ ಹೀಲಿಯಂ ಗ್ಯಾಸ್ ತುಂಬುತ್ತಿದ್ದ.

ಅದು ಅಲ್ಲದೆ, ಸಿಲಿಂಡರ್ ಅನ್ನು ವೇಗವಾಗಿ ಆನ್–ಆಫ್ ಮಾಡಿದ್ದರಿಂದ ಒಳಭಾಗದಲ್ಲಿ ಹೀಟ್ ಉಂಟಾಗಿ ಒತ್ತಡ ಹೆಚ್ಚಾಗಿತ್ತು. ಇದರ ಪರಿಣಾಮ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಮೈಸೂರು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನು ಇಂದು ಮೈಸೂರಿಗೆ ಎನ್ ಐಎ ತಂಡ ಆಗಮಿಸಲಿದ್ದು, ಅರಮನೆಯ ಬಳಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಎನ್ ಐಎ ತಂಡ ಪರಿಶೀಲನೆ ನಡೆಸಲಿದೆ ಎಂದು ಮಾಹಿತಿ ಇದೆ.

Prajavikshane

Chandru R Bhanapaur

Leave a Reply

error: Content is protected !!