JOB ALERT : ಆರೋಗ್ಯ ಇಲಾಖೆ : ಕಲ್ಯಾಣ ಕರ್ನಾಟಕ ಮೀಸಲು ನೇಮಕಾತಿಯಲ್ಲಿ ಬರೋಬ್ಬರಿ 877 ಅರೆ ವೈದ್ಯಕೀಯ ಹುದ್ದೆಗಳು ಖಾಲಿ..!
ಪ್ರಜಾವೀಕ್ಷಣೆ ಸುದ್ದಿ :
ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮೀಸಲು ನೇಮಕಾತಿಯಲ್ಲಿ ಖಾಲಿ ಇರುವ ವಿವಿಧ ವೃಂದದ 877 ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿಯಿಂದ ಭರ್ತಿ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಅಧಿಕೃತ ಸರಕಾರದ ಪತ್ರಗಳಲ್ಲಿ ಕೋರಲಾದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇದ್ದ ವಿವಿಧ ವೃಂದದ 877 ಅರವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಮತ್ತು CA ಸುಧಾರಣೆ ಇಲಾಖೆಗಳೊಂದಿಗೆ ಸಮಾಲೋಚಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿಯಿರುವ ವಿವಿಧ ವೃಂದದ 877 ವೈದ್ಯಕೀಯ ಹುದ್ದೆಗಳನ್ನು ನೇರನೇಮಕಾತಿಯಿಂದ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿದೆ.