ಬೆಂಗಳೂರು : ಈ ಹಿಂದೆ ರಾಜ್ಯದಲ್ಲಿ 15,000 ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ನಡೆದಿತ್ತು, ಬಳಿಕ ತಾತ್ಕಾಲಿಕ ಆಯ್ಕೆ ಪಟ್ಟಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಆ ಬಳಿಕ 1:1 ಅಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಹಾಗಾಗಿ ಇದೀಗ ಅಭ್ಯರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿವೊಂದು ಹೊರಬಂದಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ಬಿಡುಗಡೆ ಮಾಡಿದ್ದು, ಪದವೀಧರ ಪ್ರಾಥಮಿಕ ಶಿಕ್ಷಕರ-2022ರ ನೇಮಕಾತಿಗೆ ಕುರಿತಂತೆ ಕಳೆದ ಮಾರ್ಚ್ 08 ರಂದು 1:1 ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶದಂತೆ ರಾಜ್ಯ ಸರ್ಕಾರವು ಕಳೆದ ಫೆಬ್ರವರಿ 01ರ ಸುತ್ತೋಲೆಯ ಅನ್ವಯಿಸುವ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಕಲ್ಬುರ್ಗಿ, ಬೀದರ್, ಬಳ್ಳಾರಿ, ವಿಜಯನಗರ, ರಾಯಚೂರು, ಯಾದಗಿರಿ, ಕೊಪ್ಪಳ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಜಿಲ್ಲೆಗಳನ್ನು ಹೊರತುಪಡಿಸಿ, ಸದರಿ ಸುತ್ತೋಲೆಯು ಅನ್ವಯಿಸದ 26 ಜಿಲ್ಲೆಗಳಲ್ಲಿ 1:1 ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಆಯ್ಕೆಯಾಗಿರುವ ಎಲ್ಲಾ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ ಪರಿಶೀಲನೆ ಕಾರ್ಯಕ್ಕೆ ಕ್ರಮ ಕೈಗೊಳ್ಳಲು ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮೂಲ ದಾಖಲೆಗಳ ಪರಿಶೀಲನೆಗಾಗಿ ಪ್ರಮುಖವಾಗಿ ಈ ಕೆಳಕಂಡ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲು ಸೂಚನೆ
1. ವೈದ್ಯಕೀಯ ಪ್ರಮಾಣ ಪತ್ರ
2. ಪೊಲೀಸ್ ಪರಿಶೀಲನಾ ಪ್ರಮಾಣ ಪತ್ರ
3. ಸಿಂಧುತ್ವ ಪ್ರಮಾಣಪತ್ರ
4. ಗ್ರಾಮೀಣ ಪ್ರಮಾಣ ಪತ್ರ
5. ನ್ನಡ ಮಾಧ್ಯಮ ಪ್ರಮಾಧ ಪತ್ರ
6. ಮಾಜಿ ಸೈನಿಕರ ಪ್ರಮಾಣ ಪತ್ರ
7. ಅಂಗವಿಕಲ ಪ್ರಮಾಣ ಪತ್ರ
8. ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ
9. ಸಂಬಂಧಿಸಿದ ಎಲ್ಲಾ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು
10. ಸೇವಾನಿರತ ಶಿಕ್ಷಕರು ಸಲ್ಲಿಸಿರುವ ನಿರಾಪೇಕ್ಷಣ ಪ್ರಮಾಣ ಪತ್ರ.
ಈ ಎಲ್ಲಾ ಪ್ರಮಾಣ ಪತ್ರಗಳ ಪರಿಶೀಲನೆಗೊಳಪಡಿಸಲು, ಸಂಬಂಧ ಪಟ್ಟತಂಹ ಸಕ್ಷಮ ಪ್ರಾಧಿಕಾರಿಗಳಿಗೆ ಸಂಬಂಧಿಸಿದ ಪ್ರಮಾಣಪತ್ರಗಳನ್ನು ಕಾಲಕ್ರಮದ ಮಿತಿಯಲ್ಲಿ ಕಳುಹಿಸಿ ಕ್ರಮವಹಿಸುವಂತೆ ತಿಳಿಸಲಾಗಿದೆ.