You are currently viewing BIG NEWS : ಶಕ್ತಿ ಯೋಜನೆ : ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕಾಗಿ ಇನ್ಮುಂದೆ ‘ಸ್ಮಾರ್ಟ್ ಕಾಡ್೯’!

BIG NEWS : ಶಕ್ತಿ ಯೋಜನೆ : ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕಾಗಿ ಇನ್ಮುಂದೆ ‘ಸ್ಮಾರ್ಟ್ ಕಾಡ್೯’!

BIG NEWS : ಶಕ್ತಿ ಯೋಜನೆ : ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕಾಗಿ ಇನ್ಮುಂದೆ ‘ಸ್ಮಾರ್ಟ್ ಕಾಡ್೯’!

ಪ್ರಜಾವೀಕ್ಷಣೆ ಸುದ್ದಿ : 

ಪ್ರಜಾವೀಕ್ಷಣೆ ಡಿಜಿಟಲ್ ಡೆಸ್ಕ್ : ರಾಜ್ಯ ಸರ್ಕಾರವು ಮಹಿಳೆಯರಿಗಾಗಿ ಜಾರಿ ಮಾಡಲಾಗಿರುವ ಶಕ್ತಿ ಯೋಜನೆಯನ್ನು ಸರಳವಾಗಿಸಲು ಸರ್ಕಾರ ಮುಂದಾಗಿದೆ.

ಇದೀಗ ಶೀಘ್ರದಲ್ಲೇ ಎಲ್ಲಾ ಮಹಿಳೆಯರಿಗೆ ಶಕ್ತಿ ಯೋಜನೆಯ ‘ಸ್ಮಾರ್ಟ್ ಕಾರ್ಡ್’ ವಿತರಿಸಲಿದೆ. ಇದರಿಂದ ಮಹಿಳೆಯರಿಗೆ ಆಧಾರ್ ಕಾರ್ಡ್ ಇಟ್ಟುಕೊಂಡು ಪ್ರಯಾಣ ಮಾಡುವ ಕಿರಿಕಿರಿ ತಪ್ಪಲಿದೆ. ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವ ರಾಜ್ಯದ ಮಹಿಳೆಯರು ಇನ್ಮುಂದೆ ಸ್ಮಾರ್ಟ್ ಕಾಡ್೯ ತೋರಿಸಿದ್ರೆ ಸಾಕು, ಆಧಾರ್ ಕಾರ್ಡ್ ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಶೀಘ್ರವೇ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಉಚಿತವಾಗಿ ಕೈಸೇರಲಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆ ಜಾರಿ ಯಾಗಿ ಇದೀಗ 2.5 ವರ್ಷಗಳ ಬಳಿಕ ಇದೀಗ ಸ್ಮಾರ್ಟ್ ಕಾರ್ಡ್ ನೀಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.

ಶಕ್ತಿ ಯೋಜನೆ ಲಾಭ ರಾಜ್ಯದ ಮಹಿಳೆಯರು ಮಾತ್ರ ಪಡೆಯುವಂತೆ ಮಾಡಲು ಸ್ಮಾರ್ಟ್ಕಾರ್ಡ್ ನೀಡಲು ಸಾರಿಗೆ ಇಲಾಖೆ ಯೋಜಿಸಿದ್ದು, ಅದಕ್ಕಾಗಿ ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸ್ಮಾರ್ಟ್ ಕಾರ್ಡ್ ಗಾಗಿ ಮಹಿಳಾ ಪ್ರಯಾಣಿಕರಿಂದ ಶುಲ್ಕ ಪಡೆಯಬೇಕೇ ಅಥವಾ ಸರ್ಕಾರದಿಂದಲೇ ವೆಚ್ಚ ಭರಿಸಲಾಗುತ್ತದೆಯೇ ಎಂಬುದು ನಿರ್ಧಾರವಾಗಲಿದೆ. ಸದ್ಯ ಸಾರಿಗೆ ನಿಗಮಗಳಿಂದ ಸಲ್ಲಿಕೆಯಾಗಿರುವ ಪ್ರಸ್ತಾವನೆಯಲ್ಲಿ ಶುಲ್ಕದ ವಿಚಾರ ಬಗ್ಗೆ ಸ್ಪಷ್ಟತೆಯಿಲ್ಲ. ಇನ್ನು, ಸಂಪುಟ ಒಪ್ಪಿಗೆ ದೊರೆತ ಬಳಿಕ ಸೇವಾ ಸಿಂಧು ವೆಬ್ ಸೈಟ್ನಲ್ಲಿ ದಾಖಲೆಗಳನ್ನು ಸಲ್ಲಿಸಿ ಮಹಿಳಾ ಪ್ರಯಾಣಿಕರು ಸ್ಮಾರ್ಟ್ ಕಾರ್ಡ್ಗೆ ಅರ್ಜಿ ಸಲ್ಲಿಸುವ ವ್ಯವಸ್ಥೆ ಜಾರಿ ಮಾಡಲಾಗುತ್ತದೆ ಎಂದು ಹೇಳಬಹುದು.

 ವರದಿ: ಚಂದ್ರು ಆರ್ ಭಾನಾಪುರ್, ಸಂಪಾದಕರು.

Prajavikshane

Chandru R Bhanapaur

Leave a Reply

error: Content is protected !!