BIG NEWS : ಕೊಪ್ಪಳದಲ್ಲಿ ರಾಜಕೀಯ ಹೈಡ್ರಾಮಾ : ಕೇಂದ್ರ ಸಚಿವ VS ರಾಜ್ಯ ಸಚಿವರ ಗಲಾಟೆ.!!

ಪ್ರಜಾವೀಕ್ಷಣೆ ಸುದ್ದಿ :
ಕೊಪ್ಪಳ : ಜಿಲ್ಲೆಯ ಹಿಟ್ನಾಳ ಗ್ರಾಮದ ಹತ್ತಿರ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ರಣರಂಗವಾಗಿ ಮಾರ್ಪಟ್ಟಿತು.
ಇಂದು ನಡೆದ ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಆರೋಪಿಸಿ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಎದುರೇ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದ ಶಿಷ್ಟಾಚಾರದ (ಪ್ರೋಟೋಕಾಲ್) ಪ್ರಕಾರ ಆಹ್ವಾನ ಪತ್ರಿಕೆ ಮತ್ತು ಫ್ಲೆಕ್ಸ್‌ಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ಹಾಗೂ ಸ್ಥಳೀಯ ಸಂಸದ ರಾಜಶೇಖರ್ ಹಿಟ್ನಾಳ್ ಅವರ ಹೆಸರು ಇರಬೇಕಿತ್ತು. ಆದರೆ, ಇವರ ಹೆಸರುಗಳನ್ನು ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಸಿಟ್ಟಿಗೆ ಮೂಲ ಕಾರಣವಾಗಿತ್ತು. ಕೇಂದ್ರ ಸಚಿವರು ಆಗಮಿಸುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗುತ್ತಾ ಮುತ್ತಿಗೆ ಹಾಕಲು ಯತ್ನಿಸಿದರು.
ಇದೇ ವೇಳೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಂಸದ ರಾಜಶೇಖರ್ ಹಿಟ್ನಾಳ್,ಸ್ಥಳೀಯ ಶಾಸಕ ರಾಘವೇಂದ್ರ ಹಿಟ್ನಾಳ ಆಗಮಿಸಿದರು.

ಶಿಷ್ಟಾಚಾರ ಉಲ್ಲಂಘನೆ ವಿವಾದ : ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ವಾಗ್ವಾದ..!
ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವ ಶಿವರಾಜ್ ತಂಗಡಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರುಗಳನ್ನು ನಮೂದಿಸಿಲ್ಲ ಎಂದು ಸಚಿವ ಶಿವರಾಜ್ ತಂಗಡಗಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತದೆ ಎಂದು ತಂಗಡಗಿ ಖಾರವಾಗಿ ಹೇಳಿದರು ಹೇಳಿದರು.
ಕಾಮಗಾರಿಯ ವಿವರ :

ಹಿಟ್ನಾಳ – ಮುನಿರಾಬಾದ್ – ಗಿಣಗೇರಾ ಮಾರ್ಗದ ಎಲ್‌ಸಿ ಸಂಖ್ಯೆ 77ರ ಬದಲಾಗಿ ಈ ರಸ್ತೆ ಮೇಲ್ಸೇತುವೆಯನ್ನು (ಆರ್‌ಒಬಿ) ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 27 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ಇದು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಿದೆ.
“ಇದು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಅನುದಾನದಲ್ಲಿ ನಡೆಯುತ್ತಿರುವ ಯೋಜನೆಯಾಗಿದೆ. ಇಲ್ಲಿ ಯಾವುದೇ ಪ್ರೋಟೋಕಾಲ್ ಉಲ್ಲಂಘನೆಯಾಗಿಲ್ಲ. ಉದ್ದೇಶಪೂರ್ವಕವಾಗಿಯೇ ಕೆಲವರು ಗಲಾಟೆ ಸೃಷ್ಟಿಸಲು ಸಂಚು ರೂಪಿಸಿದ್ದಾರೆ,”
