You are currently viewing FLASH NEWS : ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ : ಶಾಸಕ ಬಸವರಾಜ್ ರಾಯರೆಡ್ಡಿ!

FLASH NEWS : ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ : ಶಾಸಕ ಬಸವರಾಜ್ ರಾಯರೆಡ್ಡಿ!

FLASH NEWS : ಪೂರ್ಣಾವಧಿ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ : ಶಾಸಕ ಬಸವರಾಜ್ ರಾಯರೆಡ್ಡಿ!

ಪ್ರಜಾ ವೀಕ್ಷಣೆ ಸುದ್ದಿ : 

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದೀರ್ಘಾವಧಿವರೆಗೆ ಸಿಎಂ ಆಗುವ ಮೂಲಕ ಮಾಜಿ ಸಿಎಂ ದಿ. ದೇವರಾಜ ಅರಸು ಅವರ ದಾಖಲೆ ಮುರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪತ್ರ ಬರೆದು ಶುಭಹಾರೈಸಿದ್ದಾರೆ.

‘ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷ ಇರುತ್ತಾರೆ. 2.5 ವರ್ಷಕ್ಕೆ ಅವರನ್ನು ಸಿಎಂ ಆಗಿ ಶಾಸಕರು ಆಯ್ಕೆ ಮಾಡಿಲ್ಲ’ ಎಂದು ರಾಯರೆಡ್ಡಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಯರೆಡ್ಡಿ , ‘ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ. ಯಾರಿಗೆ ಸಿಎಂ ಆಗಲು ಇಷ್ಟ ಇರುವುದಿಲ್ಲ ಹೇಳಿ. ನಾನು ಸಿಎಂ ಯಾಕೆ ಆಗಬಾರದು? ನಾನು ಸೀನಿಯರ್ ಇದ್ದೇನೆ. ಸಿಎಂ ಬದಲಾವಣೆ ಆಗಬೇಕಾದರೆ ಶಾಸಕರ ಅಭಿಪ್ರಾಯ ಪಡೆಯಬೇಕು. ಇದೆಲ್ಲವೂ ಆಗದೇ ಹೇಗೆ ಬದಲಾವಣೆ ಆಗುತ್ತದೆ’ ಎಂದು ಪ್ರಶ್ನೆ ಮಾಡಿದ್ದಾರೆ.

‘ಹೈಕಮಾಂಡ್ ನಿರ್ಧಾರ ಅಂತಿಮ ಎಂಬುದಾಗಿ ಡಿಕೆಶಿ ಹೇಳಿದ್ದಾರೆ. ಇಕ್ಬಾಲ್ ಹುಸೇನ್ ಮನೋರಂಜನೆಗೋಸ್ಕರ ಡಿಕೆಶಿ ಸಿಎಂ ಎಂದು ಹೇಳುತ್ತಾರೆ. ಡಿಕೆ ಶಿವಕುಮಾರ್‌ ಅವರಿಗೆ ಮುಂದೆ ಸಿಎಂ ಆಗುವ ಅವಕಾಶ ಸಿಗಬಹುದು. ಡಿಕೆಶಿ ಆಕಾಂಕ್ಷಿ ಆಗುವುದರಲ್ಲಿ ತಪ್ಪಿಲ್ಲ. ಸಮಯ ಸಂದರ್ಭ ಮುಖ್ಯ ಆಗುತ್ತದೆ. 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ರಾಯರೆಡ್ಡಿ ಪುನರುಚ್ಚಾರ ಮಾಡಿದ್ದಾರೆ.

ಮುಖ್ಯಮಂತ್ರಿ ಅವರು ಬಜೆಟ್ ಸಿದ್ದತೆ ಪ್ರಾರಂಭ ಮಾಡಿದ್ದಾರೆ. ಜನವರಿ 16 ಬಳಿಕ ಬಜೆಟ್ ಸಿದ್ದತೆಗೆ ಒಂದು ರೂಪ ಸಿಗುತ್ತದೆ. ಬಜೆಟ್ ಸಿದ್ದತೆ ಮಾಡಿ ಫೆಬ್ರವರಿಯಲ್ಲಿ ಬಜೆಟ್ ಮಂಡನೆಗೆ ಮುಖ್ಯಮಂತ್ರಿಯವರೇ ದಿನಾಂಕ ‌ನಿಗದಿ ಮಾಡುತ್ತಾರೆ. ಈ ಬಾರಿ ಅಭಿವೃದ್ಧಿಗೆ ಹೆಚ್ವು ಮಹತ್ವದ ಕೊಡುವ ಚಿಂತನೆ ಇದೆ. ಕಳೆದ ವರ್ಷಕ್ಕಿಂತ ಜಾಸ್ತಿ ಬಜೆಟ್ ಗಾತ್ರ ದಾಟಲಿದೆ ಎಂದು ತಿಳಿಸಿದರು.

Prajavikshane

Chandru R Bhanapaur

Leave a Reply

error: Content is protected !!