You are currently viewing LOCAL  NEWS : ‘ಆಡೂರಿನಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ : ಗ್ರಾಮೀಣ ಮಕ್ಕಳಿಗೆ ಹೊಸ ಅವಕಾಶ’

LOCAL  NEWS : ‘ಆಡೂರಿನಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ : ಗ್ರಾಮೀಣ ಮಕ್ಕಳಿಗೆ ಹೊಸ ಅವಕಾಶ’

LOCAL  NEWS : ‘ಆಡೂರಿನಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ : ಗ್ರಾಮೀಣ ಮಕ್ಕಳಿಗೆ ಹೊಸ ಅವಕಾಶ’

ಪ್ರಜಾ ವೀಕ್ಷಣೆ ಸುದ್ದಿ :

ಕುಕನೂರು: ತಾಲೂಕಿನ ಆಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ತಾಲ್ಲೂಕು ಗ್ರಾಮೀಣ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಆಯೋಜಿಸಲಾಯಿತು.

ಮಕ್ಕಳ ಕಲಿಕಾ ಆಸಕ್ತಿ ಹಾಗೂ ಸೃಜನಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ನಡೆದ ಈ ಹಬ್ಬವನ್ನು ‘ಕಲಿಕಾ ಚಿಟ್ಟೆ’ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಮಹೇಶ್ ಸಬರದ ಮಾತನಾಡಿ, ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಶಿಕ್ಷಕರ ಜೊತೆಗೆ ಪೋಷಕರ ಸಹಕಾರವೂ ಅಗತ್ಯ ಎಂದು ಹೇಳಿದರು. ಶಿಕ್ಷಣವು ಕೇವಲ ಪಠ್ಯಕ್ಕೆ ಸೀಮಿತವಾಗದೆ ಜೀವನಕ್ಕೆ ದಾರಿ ತೋರಿಸಬೇಕು ಎಂದರು.

ಪ್ರಾಥಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಮಾರುತಿ ತಳವಾರ್ ಮಾತನಾಡಿ, ಮಕ್ಕಳು ಮೊಬೈಲ್ ಗೀಳಿನಿಂದ ಹೊರಬಂದು ಅದನ್ನು ಶಿಕ್ಷಣಕ್ಕಾಗಿ ಮಾತ್ರ ಬಳಸಬೇಕು ಎಂದು ಸಲಹೆ ನೀಡಿದರು. ‘ಪ್ರಶ್ನೆಯು ಪ್ರಜ್ಞೆಯಾಗಲಿ’ ಎಂಬ ಧ್ಯೇಯದೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಂಡಾಗಲೇ ಜ್ಞಾನ ಸಂಪಾದನೆ ಸಾಧ್ಯ ಎಂದು ಹೇಳಿದರು.

ಎಸ್‌ಡಿಎಂಸಿ ಅಧ್ಯಕ್ಷ ವೀರಣ್ಣ ಚೌಡಿ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಿಗೆ ತಮ್ಮ ಸಂಸ್ಕೃತಿಯ ಪರಿಚಯ ನೀಡುವ ಜೊತೆಗೆ ಚಿತ್ರಕಲೆ, ಮಣ್ಣಿನ ಮಾದರಿ ತಯಾರಿಕೆ, ಕಾಗದದ ಕೆಲಸ, ನಾಟಕಗಳ ಮೂಲಕ ಮಕ್ಕಳ ಸೃಜನಶೀಲ ಶಕ್ತಿಯನ್ನು ಉತ್ತೇಜಿಸುತ್ತದೆ ಎಂದು ಹೇಳಿದರು. ಇಂತಹ ಚಟುವಟಿಕೆಗಳು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದರು.

ಕಾರ್ಯಕ್ರಮದಲ್ಲಿ ಸಿಆರ್‌ಪಿ ಪೀರ್‌ಸಾಬ್ ದಪ್ಪದಾರ್, ನಾಗರಾಜ ಚಲವಾದಿ, ಶರಣಪ್ಪ ತೊಂಡಿಹಾಳ, ವೀರೇಶ ಬಟಪ್ನಳ್ಳಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಿದ್ದನಗೌಡ ರಬ್ಬನಗೌಡ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಕೋಟೇಶ್ ಗೊಂದಿ ಸೇರಿದಂತೆ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು, ಯುವಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a Reply

error: Content is protected !!