LOCAL NEWS : ತಾಲೂಕಿನ ಜನರು ಅಭಿವೃದ್ಧಿಗೆ ಸಹಕಾರ ನೀಡಬೇಕು : ಶಾಸಕ ಬಸವರಾಜ ರಾಯರೆಡ್ಡಿ

You are currently viewing LOCAL NEWS : ತಾಲೂಕಿನ ಜನರು ಅಭಿವೃದ್ಧಿಗೆ ಸಹಕಾರ ನೀಡಬೇಕು : ಶಾಸಕ ಬಸವರಾಜ ರಾಯರೆಡ್ಡಿ

LOCAL NEWS : ತಾಲೂಕಿನ ಜನರು ಅಭಿವೃದ್ಧಿಗೆ ಸಹಕಾರ ನೀಡಬೇಕು : ಶಾಸಕ ಬಸವರಾಜ ರಾಯರೆಡ್ಡಿ

ಪ್ರಜಾ ವೀಕ್ಷಣೆ ಸುದ್ದಿ : 

ಕುಕನೂರು : ‘ಕುಕನೂರು ತಾಲೂಕಿನ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಿದ್ದೇನೆ, ಆದರೆ, ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡಬೇಕು’ ಎಂದು ಶಾಸಕ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.

ಇಂದು ವಿವಿಧ ಗ್ರಾಮಗಳಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯಲ್ಲಿ ವಿವಿಧ ಕಾಮಗಾರಿಗಳಿಗೆ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಚಾಲನೆ ನೀಡಿದರು.

ತಾಲೂಕಿನ ಬನ್ನಿಕೊಪ್ಪ,ಸೋಂಪುರ, ಮಳೆಕೊಪ್ಪ, ಮನ್ನಾಪುರ, ಬಟಪನಹಳ್ಳಿ, ಚಿಕೆನಕೊಪ್ಪ, ಸಿಗ್ನೇಕೊಪ್ಪ, ಬಿನ್ನಾಳ ಹಾಗೂ ಎರೆ ಹಂಚಿನಾಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಭೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಚಾಲನೆ ನೀಡಿದರು.

ಈ ಜನ ಸಂಪರ್ಕ ಸಭೆಯನ್ನು ಆಯೋಜಿಸುತ್ತ ಕ್ಷೇತ್ರದ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಕಡ್ಡಾಯವಾಗಿ ಪ್ರತಿಯೊಬ್ಬ ಪ್ರಜೆಗಳ ಮನದಾಳದ ಮಾತನ್ನು ಆಲಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಜನತೆ ತಮ್ಮ ಕುಂದು ಕೊರತೆಗಳನ್ನು ಬರೆದು ನೀಡಿದಲ್ಲಿ ಸಾಧ್ಯವಾದ ಎಲ್ಲಾ ಕೊರತೆಗಳನ್ನು ನೀಗಿಸುವ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆಯಲ್ಲಿ ತಹಸಿಲ್ದಾರ ಬಸವರಾಜ್, ಬೆಣ್ಣೆ ಶಿರೂರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ್ ಬಿರಾದರ್, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಗೌಡ, ಸೇರಿದಂತೆ ತಾಲೂಕ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು, ಕಾಂಗ್ರೆಸ್‌ ಮುಖಂಡರಾದ ವೆಂಕಣ್ಣ ಯರಾಶಿ, ಹನುಮಂತಗೌಡ ಚಂಡೂರ್, ಸಂಗಮೇಶ್ ಗುತ್ತಿ, ಕೆರಿಬಸಪ್ಪ ನಿಡಗುಂದಿ, ಡಾ. ಶಿವನಗೌಡ ದಾನರೆಡ್ಡಿ ಹಾಗೂ ಇನ್ನೂ ಅನೇಕರು ಪಾಲ್ಗೊಂಡಿದ್ದರು.

Leave a Reply

error: Content is protected !!