LOCAL NEWS : ಜ. 28 ರಂದು ಭಟ್ಕಳದಲ್ಲಿ “ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ” ಹಾಗೂ “ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ”
ಕುಕನೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ), ಬೆಂಗಳೂರು ಹಾಗೂ ಭಟ್ಕಳ ತಾಲ್ಲೂಕು ಘಟಕ, ಉತ್ತರ ಕನ್ನಡ ಜಿಲ್ಲೆ ಇವರ ಸಹಯೋಗದಲ್ಲಿ ಇದೇ ಜನವರಿ 28ರಂದು ಭಟ್ಕಳ ನಗರದ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ “ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ”ವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಸುನಿಲ್ ಕುಮಾರ್ ಮಠದ ಅವರು ತಿಳಿಸಿದ್ದಾರೆ.
ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಪರಮಪೂಜ್ಯ ಮಾರುತಿ ಗುರುಜಿ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ಶ್ರೀ ವಿಶ್ವ ವೀರಾಂಜನೇಯ ಮಹಾಸಂಸ್ಥಾನಂ, ಹೇಮಪುರ ಮಹಾಪೀಠಮ್, ಶ್ರೀಕ್ಷೇತ್ರ ಬಂಗಾರಮಕ್ಕಿ, ಹೊನ್ನಾವರದ ಧರ್ಮಾಧಿಕಾರಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಅವರು ಉದ್ಘಾಟಿಸವರು.
ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಸಂಸ್ಥಾಪಕ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಅವರು ಮಾತನಾಡುವರು.ಭಟ್ಕಳ ತಾಲ್ಲೂಕು ಅಧ್ಯಕ್ಷ ಶಂಕರ ನಾಯ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಗ್ಯಾರಂಟಿ ನ್ಯೂಸ್ ಚಾನಲ್‌ನ ಮುಖ್ಯಸ್ಥೆ ರಾಧಾ ಹಿರೇಗೌಡರ್ ಹಾಗೂ ಟಿ.ಎಸ್.ಆರ್. ಪ್ರಶಸ್ತಿ ಪುರಸ್ಕೃತ ಗಂಗಾಧರ ಮೊದಲಿಯಾರ್ ಅವರು ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಶಿವಾನಂದ ನಾಯ್ಕ, ತಂಜಿಂ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಉಚ್ಚ ನ್ಯಾಯಾಲಯ ವಕೀಲ ನಾಗೇಂದ್ರ ನಾಯ್ಕ, ಸುಪ್ರೀಂ ಕೋರ್ಟ್ ವಕೀಲ ಮಂಜುನಾಥ ಮಾಡ್ಯಾಳ್, ಹಿರಿಯ ಪತ್ರಕರ್ತ ಜಗಳೂರು ಲಕ್ಷ್ಮಣ ರಾವ್, ಭಟ್ಕಳ ತಹಶೀಲ್ದಾರ ನಾಗೇಂದ್ರ ಕೋಳ ಶೆಟ್ಟಿ, ಡೆಪ್ಯೂಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಮಹೇಶ್ ಎಂ.ಕೆ., ಪುರಸಭೆಯ ಮುಖ್ಯಾಧಿಕಾರಿ ವೆಂಕಟೇಶ್ ನಾವುಡ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಇದಲ್ಲದೆ ವಿವಿಧ ಜಿಲ್ಲೆಗಳ ಅಧ್ಯಕ್ಷರು, ಹಿರಿಯ ಪತ್ರಕರ್ತರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಕುಕನೂರ ತಾಲ್ಲೂಕು ಘಟಕದ ಅಧ್ಯಕ್ಷ ಚಂದ್ರು ಆರ್. ಭಾನಾಪುರ, ಪ್ರಧಾನ ಕಾರ್ಯದರ್ಶಿ ಬಸವರಾಜ ಕೊನಾರಿ, ಉಪಾಧ್ಯಕ್ಷ ಮುರಾರಿ ಭಜಂತ್ರಿ, ಗೌರವಾಧ್ಯಕ್ಷ ಮಹೇಶ್ ಕಲ್ಮಠ, ವೀರಯ್ಯ ವಿ. ಹಿರೇಮಠ, ಭೀಮಾಶಂಕರ ಪಾಣೆಗಾಂವ, ಮುತ್ತು ತೊಂಟದಾರ್ಯ ಮಠ, ವೀರಯ್ಯ ಕುರ್ತಕೋಟಿ, ವಿಶ್ವನಾಥ ಪಟ್ಟಣಶೆಟ್ಟಿ, ಮಲ್ಲಯ್ಯ ಗದಗಿನ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.