STATE NEWS : ಕಳಕಪ್ಪ ಕಂಬಳಿ ಅವರಿಗೆ “ಕರ್ನಾಟಕ ಸಾಧಕ ಶ್ರೇಷ್ಠ ರತ್ನ” ರಾಜ್ಯಮಟ್ಟದ ಪ್ರಶಸ್ತಿ ಪ್ರಧಾನ..!!

ಪ್ರಜಾ ವೀಕ್ಷಣೆ ಸುದ್ದಿ :
ಕುಕುನೂರು : ಪಟ್ಟಣದ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಕಳಕಪ್ಪ ಕಂಬಳಿ ಅವರಿಗೆ ರಾಜ್ಯಮಟ್ಟದ ಕರ್ನಾಟಕ ಸಾಧಕ ಶ್ರೇಷ್ಠ ರತ್ನ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಕರಾವಳಿ ಭಾಗದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ನಾಗಯಾಕ್ಷೆ ಸಭಾಭವನದಲ್ಲಿ ಬುಧವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ (ರಿ) ಬೆಂಗಳೂರು ಹಾಗೂ ಭಟ್ಕಳ ತಾಲೂಕ ಘಟಕದ ವತಿಯಿಂದ ಆಯೋಜಿಸಿದ್ದ “ರಾಜ್ಯಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ”ದಲ್ಲಿ ರಾಜ್ಯದಲ್ಲಿ ಉತ್ತಮ ಸಮಾಜ ಸೇವೆ ಮಾಡಿದ ಮಹನೀರನ್ನು ಗುರುತಿಸಿ ಗೌರವಿಸಲಾಯಿತು.
ಇದೆ ವೇಳೆಯಲ್ಲಿ ಕುಕನೂರು ಪಟ್ಟಣದ ಕಳಕಪ್ಪ ಕಂಬಳಿ ಅವರಿಗೆ ಅವರ ನಿರಂತರ ಸಮಾಜಮುಖಿ ಕಾರ್ಯ, ಶೋಷಿತರ ಸೇವೆ ಹಾಗೂ ಜನಪರ ಕಾಳಜಿಯನ್ನು ಗುರುತಿಸಿ “ಕರ್ನಾಟಕ ಸಾಧಕ ಶ್ರೇಷ್ಠ ರತ್ನ” ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.
“ಕುಕನೂರು ಮತ್ತು ಯಲಬುರ್ಗಾ ವಿಧಾನಸಭಾ ಕ್ಷೇತ್ರಗಳಲ್ಲಿ ನನ್ನ ಕೈಲಾದ ಸಹಾಯವನ್ನು ಮಾಡುತ್ತಾ ಜನರೊಂದಿಗೆ ಬೆರೆಯುವ ಪ್ರಯತ್ನವನ್ನು ಮಾಡಿದ್ದೇನೆ. ಈ ಕಾರ್ಯಗಳನ್ನು ಗುರುತಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯವರು ನನಗೆ ಈ ಪ್ರಶಸ್ತಿ ಪ್ರಧಾನ ಮಾಡಿರುವುದು ಅತ್ಯಂತ ಸಂತಸದ ವಿಷಯವಾಗಿದೆ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿಗಳು ಇನ್ನು ಹೆಚ್ಚಿನದಾಗುತ್ತಿದ್ದು, ಕೈಲಾದ ಮಟ್ಟಿಗೆ ಸಮಾಜಮುಖಿ ಕಾರ್ಯಗಳಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ”