You are currently viewing BIG NEWS : ಬಬಲೇಶ್ವರ ತಾಲ್ಲೂಕಿನಲ್ಲಿ ಖಾಸಗಿ ಮಿನಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ..!

BIG NEWS : ಬಬಲೇಶ್ವರ ತಾಲ್ಲೂಕಿನಲ್ಲಿ ಖಾಸಗಿ ಮಿನಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ..!

BIG NEWS : ಬಬಲೇಶ್ವರ ತಾಲ್ಲೂಕಿನಲ್ಲಿ ಖಾಸಗಿ ಮಿನಿ ಜೆಟ್ ಪತನ : ಇಬ್ಬರಿಗೆ ಗಂಭೀರ ಗಾಯ..!

ಪ್ರಜಾ ವೀಕ್ಷಣೆ ಸುದ್ದಿ :

ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದ ಸಮೀಪ ಶನಿವಾರ ಖಾಸಗಿ ಮಿನಿ ಜೆಟ್ ವಿಮಾನವೊಂದು ಪತನಗೊಂಡಿದೆ. ಕಲಬುರ್ಗಿಯಿಂದ ಬೆಳಗಾವಿಗೆ ಪ್ರಯಾಣಿಸುತ್ತಿದ್ದ ‘ರೆಡ್ ಬರ್ಡ್’ ಹೆಸರಿನ ಸೆಸ್ನಾ–172 (ಟ್ಯಾಂಗೋ ಚಾರ್ಲಿ) ಮಾದರಿಯ ವಿಮಾನವು ತಾಂತ್ರಿಕ ದೋಷದಿಂದ ಹೊಲದ ಬಳಿ ಧರೆಗೆ ಉರುಳಿದೆ.

ಈ ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ತಕ್ಷಣವೇ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಾಥಮಿಕ ತನಿಖೆಯ ಪ್ರಕಾರ, ವಿಮಾನದಲ್ಲಿ ಇಂಧನ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಪೈಲಟ್ ನಿಯಂತ್ರಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ. ತುರ್ತು ಲ್ಯಾಂಡಿಂಗ್ ಮಾಡಲು ಯತ್ನಿಸುವ ವೇಳೆ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ.

ವಿಮಾನ ಪತನಗೊಂಡ ಶಬ್ದ ಕೇಳುತ್ತಿದ್ದಂತೆ ಸ್ಥಳೀಯ ಗ್ರಾಮಸ್ಥರು ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಸಹಾಯ ಮಾಡಿದ್ದಾರೆ. ಮಾಹಿತಿ ಪಡೆದ ಬಬಲೇಶ್ವರ ಠಾಣೆಯ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪತನದಿಂದ ವಿಮಾನ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಅದರ ಭಾಗಗಳು ಹೊಲದ ಸುತ್ತಮುತ್ತ ಚದುರಿರುವುದು ಕಂಡುಬಂದಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Prajavikshane

Chandru R Bhanapaur

Leave a Reply

error: Content is protected !!