EXCLUSIVE NEWS : ಕುಕನೂರು : ನಾಳೆ ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷರ ಚುನಾವಣೆ.!

ಪ್ರಜಾವೀಕ್ಷಣೆ ಡಿಜಿಟಲ್ ಸುದ್ದಿ :
ಕುಕನೂರು ಫೆ. 20 : ಕರ್ನಾಟಕ ಪುರಸಭೆಗಳ ಕಾಯ್ದೆಯನ್ವಯ ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆ ಫೆ. 21 ರಂದು ಇಂದು ತಹಶೀಲ್ದಾರ್ ಬಸವರಾಜ್ ಬೆಣ್ಣೆಶಿರೂರು ಅವರ ಸಮ್ಮುಖದಲ್ಲಿ ನಡೆಯಲಿದೆ.
ಪಟ್ಟಣ ಪಂಚಾಯಿತಿಯ ಒಟ್ಟು 19 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದ 10 ಮಂದಿ ಹಾಗೂ ಬಿಜೆಪಿ ಪಕ್ಷದ 9 ಮಂದಿ ಸದಸ್ಯರು ಇದ್ದಾರೆ. ಸದಸ್ಯರಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ.
ನಾಳೆ ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. ಬಳಿಕ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಜರುಗಲಿದ್ದು, ಮಧ್ಯಾಹ್ನ 2 ಗಂಟೆಯ ಬಳಿಕ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಅಧ್ಯಕ್ಷೆಯಾಗಿದ್ದ ಲಲಿತಮ್ಮ ಯಡಿಯಾಪುರ ಹಾಗೂ ಉಪಾಧ್ಯಕ್ಷರಾಗಿದ್ದ ಪ್ರಶಾಂತ್ ಆರ್ ಬೆರಳಿನ್ ಅವರ ಅಧಿಕಾರ ಅವಧಿ 15 ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದು, ಅವರ ತೆರವಾದ ಸ್ಥಾನಗಳಿಗೆ ಇನ್ನುಳಿದ 15 ತಿಂಗಳ ಅವಧಿಗಾಗಿ ಈ ಚುನಾವಣೆ ನಡೆಯಲಿದೆ.
ಚುನಾವಣೆಯಲ್ಲಿ ಸ್ಥಳೀಯ ಶಾಸಕರು ಹಾಗೂ ಸಂಸದರು ಮತದಾನದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಇನ್ನೂಳಿದ 15 ತಿಂಗಳ ಅಧಿಕಾರ ಅವಧಿಗೆ ಒಪ್ಪಂದದ ಮೇರೆಗೆ ಸ್ಥಾನ ಹಂಚಿಕೆ ಮಾಡಿಕೊಳ್ಳಲಾಗಿದೆ ಎಂದು ಸದಸ್ಯರು ತಿಳಿಸಿದ್ದಾರೆ.
ಈ ಹಿಂದೆ ನಡೆದ ಒಳಒಪ್ಪಂದದ ಪ್ರಕಾರ 16ನೇ ವಾರ್ಡಿನ ಲೀಲಾವತಿ ಮುಧೋಳ್ ಸಂಭಾವ್ಯ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಉಪಾಧ್ಯಕ್ಷರಾಗಿ ಮಂಜುಳಾ ಕಲ್ಮೇನಿ ನೇಮಕವಾಗುವ ಸಾಧ್ಯತೆಯೂ ಇದೆ.
“ನಾಳೆ ಫೆ. 21 ರಂದು ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ನಾಮಪತ್ರ ಸಲ್ಲಿಕೆ ನಡೆಯಲಿದೆ. ಬಳಿಕ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮತದಾನ ಪ್ರಕ್ರಿಯೆ ಜರುಗಲಿದೆ. ಮಧ್ಯಾಹ್ನ 2 ಗಂಟೆಯ ಬಳಿಕ ಫಲಿತಾಂಶ ಪ್ರಕಟವಾಗಲಿದೆ. ನಿಗದಿತ ವೇಳಾಪಟ್ಟಿಯಂತೆ ಎಲ್ಲಾ ಕ್ರಮಗಳನ್ನು ಕಾನೂನುಬದ್ಧವಾಗಿ ಹಾಗೂ ಪಾರದರ್ಶಕವಾಗಿ ನಡೆಸಲಾಗುತ್ತದೆ. ಪ. ಪಂ.ಸದಸ್ಯರಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಈಗಾಗಲೇ ಸೂಚಿಸಲಾಗಿದೆ,”